

ಚಿತ್ರದುರ್ಗ: ಕಾಂಗ್ರೆಸ್ಸಿನ 45 ಶಾಸಕರು ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ‌್ಯದರ್ಶಿ ಬಿ.ಎಲ್.ಸಂತೋಷ್ ಹೇ ಳಿಕೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,ರಾಜ್ಯವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹತಾ ಶೆಯಲ್ಲಿರುವ ಸಂತೋಷ್,ಬಿಜೆಪಿ ಶಾಸಕರ ವಲಸೆಯನ್ನು ನಿಯಂತ್ರಿಸಲು,ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸಂಪೂರ್ಣವಿಫಲವಾಗಿದೆ. ದೇಶದಲ್ಲಿ ಒಂದಾಗಿರುವ ಜಾತ್ಯತೀತ ಪಕ್ಷಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಧಿ ಕಾರ ಹಿಡಿಯಲಿವೆ. ಕೋಲಾರ ಕ್ಷೇತ್ರದ ಅಭ್ಯರ್ಥಿ ಯಾರೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. ಮಳೆ ಕೊರತೆಯಿಂದ ಕಾವೇರಿ ನದಿ ನೀರಿನ ಹಂಚಿಕೆ ಸಮಸ್ಯೆ ಕಾಣಿಸಿಕೊಂಡಿದ್ದು,ಮಳೆ ಆರಂಭವಾಗಿದ್ದು,ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಡಿಸೆಂ ಬರ್‌ನಲ್ಲಿ ಯುವ ನಿಧಿ ಯೋಜನೆ ಜಾರಿಯಾಗಲಿದೆ ಎಂದರು.