ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಹಕರಿಸಿ

29blrp2
Published on

ಬೇಲೂರು: ತಾಲೂಕಿನ ಪಡುವಳಲು ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಶಾಸಕ ಎಚ್.ಕೆ.ಸುರೇಶ್ ನಿರಂತರ ಮಳೆಗೆ ಕುಸಿದಿರುವ ಮನೆ ವೀಕ್ಷಿಸಿ, ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಹಕರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿದ್ದ ನಿರಂತರ ಮಳೆಗೆ ಪಡುವಳಲು ಗ್ರಾಮದ ಮಹೇಶ್ ಎಂಬುವರ ಮನೆ ಇತ್ತೀಚೆಗೆ ಸಂಪೂರ್ಣ ಕುಸಿದು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಮಳೆಯ ಅವಾಂತರದಿಂದ ಕೆಲ ಹಳೇ ಮನೆಗಳು ಶಿಥಿಲಗೊಂಡು ಕುಸಿಯಲಿವೆ. ಅಧಿಕಾರಿಗಳು ಕಷ್ಟದಲ್ಲಿದ್ದವರಿಗೆ ಸ್ಪಂದಿಸಬೇಕು. ಮಹೇಶ್ ಅವರಿಂದ ಸೂಕ್ತ ದಾಖಲೆ ಪಡೆದು ಮನೆ ಕಟ್ಟಿಕೊಳ್ಳಲು ಸಹಕಾರ ನೀಡಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿ ಅರೇಹಳ್ಳಿ, ಬೆಕ್ಕೊಡು ಹೋಬಳಿಗಳ ಭಾಗಗಳಲ್ಲಿ ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದರಿಂದ ಎಲ್ಲೆಲ್ಲಿ ಅನಾಹುತ ಆಗಿದೆ ಅಲ್ಲಿಗೆ ಭೇಟಿ ನೀಡಿ ಮಳೆ ಹಾನಿಗೀಡಾದವರಿಗೆ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ತಹಸೀಲ್ದಾರ್ ಎಂ.ಮಮತಾ, ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net