ಸಂತ್ರಸ್ತರಿಗೆ ಸಾಂತ್ವನ ಹೇಳಿದ ಸಚಿವೆ

24dvk 7
Published on

ಬೆಳಗಾವಿ: ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ತಾಲೂಕಿನ ಬೆಳವಟ್ಟಿ ಗ್ರಾಮದ ಚೌಗುಲೆ ಕುಟುಂಬದವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬಾಳ್ಕರ್, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಳವಟ್ಟಿ ಗ್ರಾಮದ ಯುವತಿ ರೋಹಿಣಿ ರಾಮಲಿಂಗ ಚೌಗುಲೆ ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು. ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಅವರ ಮಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದರು. ರೋಹಿಣಿ ತಾಯಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುಃಖದ ಈ ಸಮಯದಲ್ಲಿ ನಿಮ್ಮ ಜತೆಗೆ ನಾನಿದ್ದೇನೆ ಎಂದು ಕುಟುಂಬಸ್ಥರಿಗೆ ಸಚಿವೆ ಧೈರ್ಯ ಹೇಳಿದರು.ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net