ಸಂತ್ರಸ್ಥರಿಗೆ ಪರಿಹಾರ ಕೊಡಿ: ಎಸ್ ಆರ್ ಪಾಟೀಲ್.

pixlr_20201027170811772
Published on

ವಿಜಯಪುರ: ವಿಜಯಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ಭೇಟಿ ನೀಡಿದ್ದಾರೆ.ಚಡಚಣ, ಇಂಡಿ, ಆಲಮೇಲ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಎಸ್ ಆರ್ ಪಾಟೀಲ್ ಸಂತ್ರಸ್ತರ ಅಳಲು ಆಲಿಸಿದ್ರು. ಚಡಚಣ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿದ ಎಸ್ ಆರ್ ಪಾಟೀಲ್, ಪ್ರವಾಹದ ಕುರಿತು ಮಾಹಿತಿ ಕಲೆ ಹಾಕಿದ್ರು. ಇದೆ ವೇಳೆ ಪ್ರವಾಹದ ಸಂದರ್ಭದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ರು. ಕೂಡಲೇ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡವರಿಗೆ ಹಾಗೂ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಬಳಿಕ ಇಂಡಿ ಹಾಗೂ ಆಲಮೇಲ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳತ್ತ ಪ್ರಯಾಣ ಬೆಳೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net