

ಚಿಕ್ಕಬಳ್ಳಾಪುರ : ಜಿಲ್ಲೆಯ ಕಟೇನ್ಮೆಂಟ್ ವಲಯ, ಸೀಲ್‌ಡೌನ್ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್.ಲತಾ, ಕ್ರಮಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಸೋಂಕಿನಿಂದ ಯಾವುದೇ ಕಾರಣಕ್ಕೂ ಸಾವು ಸಂಭವಿಸಬಾರದು. ಗ್ರಾಮಗಳಲ್ಲಿ ಯಾರಿಗಾದರೂ ನೆಗಡಿ, ಕೆಮ್ಮು ಮತ್ತು ರೋಗದ ಇತರ ಲಕ್ಷಣಗಳು ಕಂಡು ಬಂದಲ್ಲಿ ಸ್ಥಳಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.ಟಾಸ್ಕ್‌ಫೋರ್ಸ್ ಸಮಿತಿ ಹಾಗೂ ಕರೊನಾ ಸೇನಾನಿಗಳು ಪ್ರತಿ ಗ್ರಾಮದಲ್ಲಿ ತಂಡ ರಚಿಸಿಕೊಂಡು ಪ್ರತಿಯೊಬ್ಬರ ಆರೋಗ್ಯದ ಸ್ಥಿತಿಗತಿ ತಿಳಿದುಕೊಳ್ಳಲಿದ್ದು ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.
60 ವರ್ಷ ಮೇಲ್ಪಟ್ಟವರು ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಸೋಂಕಿತರೊಂದಿಗಿನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿಗಳು ಮನೆಯಿಂದ ಹೊರಗೆ ಬರದಂತೆ ಸೂಚಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೆ.ಕೆ.ಮಿಥುನ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎನ್. ಭಾಸ್ಕರ್, ತಹಸೀಲ್ದಾರ್ ನಾಗ ಪ್ರಶಾಂತ್ ಮತ್ತಿತರರು ಇದ್ದರು.