ಸಂಪಿಗೆ ಸಿದ್ಧೇಶ್ವರ ಸ್ವಾಮಿ ರುದ್ರಾಭಿಷೇಕ ಸಂಪನ್ನ

Sampige Siddeshwara Swamy
Published on

ಚಿತ್ರದುರ್ಗ: ಐತಿಹಾಸಿಕ ಕೋಟೆಯ ಮೇಲುದುರ್ಗದಲ್ಲಿ ಇರುವ ಸಂಪಿಗೆ ಸಿದ್ಧೇಶ್ವರ ಸ್ವಾಮಿ ದೇಗುಲದಲ್ಲಿ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮದ ಅಂಗವಾಗಿ ಭಾನುವಾರ ಸ್ವಾಮಿಯ ಮಹಾರುದ್ರಾಭಿಷೇಕ ಪೂಜಾ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಮುಂಜಾನೆಯಿಂದಲೇ ಸ್ವಾಮಿಯ ಮೂರ್ತಿಗೆ ಜಲಾಭಿಷೇಕ, ಬ್ರಾಹ್ಮೀ ಮುಹೂರ್ತದಲ್ಲಿ ರುದ್ರಾಭಿಷೇಕ, ವೀರಭದ್ರಸ್ವಾಮಿಗೆ ಬಿಲ್ವಾರ್ಚನೆ, ಪಾರ್ವತಿ ದೇವಿಗೆ ಕುಂಕುಮಾರ್ಚನೆ ಸೇರಿ ಇತರೆ ಪೂಜೆಗಳು ಶಾಸ್ತ್ರೋಕ್ತವಾಗಿ ಜರುಗಿದವು.

ದೇಗುಲದೊಳಗಿನ ದೇವರ ಮೂರ್ತಿಗಳಿಗೆ ಸೇವಂತಿ ಸೇರಿ ಇತರೆ ಪುಷ್ಪಗಳಿಂದ ಅರ್ಚಕರು ಅಲಂಕರಿಸಿದ್ದರು. ನೂರಾರು ಭಕ್ತರು ಭೇಟಿ ನೀಡಿ ಇಷ್ಟಾರ್ಥ ಈಡೇರಿಕೆಗಾಗಿ ಪ್ರಾರ್ಥಿಸಿದರು. ನೆರೆದಿದ್ದ ಭಕ್ತರು ಮಹಾಮಂಗಳಾರತಿ, ತೀರ್ಥ ಪಡೆದ ನಂತರ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರ ಸಹಕಾರದಿಂದ ಪೂಜಾ ಕಾರ್ಯಕ್ರಮ ಸಂಪನ್ನಗೊಂಡಿತು ಎಂದು ಸಂಪಿಗೆ ಸಿದ್ಧೇಶ್ವರ ಸೇವಾ ಸಮಿತಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net