ಸಂಪುಟ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಒತ್ತು

Published on

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮಧುವನಹಳ್ಳಿ ಶಿವಕುಮಾರ್ ಹೇಳಿದರು.

ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಚಿಕ್ಕಲ್ಲೂರು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಕೊಳ್ಳೇಗಾಲದಲ್ಲಿ ಜಿಲ್ಲಾಸ್ಪತ್ರೆ ಸೇರಿದಂತೆ ಇನ್ನಿತರೆ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಮಾಡಿ ಯಶಸ್ವಿಯಾಗಿದ್ದು, ಕಾರಣಕಾರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಸಚಿವರು, ಶಾಸಕರು ಹಾಗೂ ಜಿಲ್ಲಾಡಳಿತಕ್ಕೆ ಯಶಸ್ಸು ಸಲ್ಲಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಶ್ಲಾಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ಅವರು ಜಿಲ್ಲೆಯಲ್ಲಿನ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಗೋಷ್ಠಿಯಲ್ಲಿ ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಕೊಳ್ಳೇಗಾಲ ನಗರಸಭಾ ಸದಸ್ಯ ಶಾಂತರಾಜು, ಮುಖಂಡರಾದ ಕಿನಕಹಳ್ಳಿ ರಾಚಯ್ಯ, ಪುಟ್ಟರಾಜು, ಜೆ.ಯೋಗೇಶ್, ಮಹದೇವನಾಯಕ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net