ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ

bkt-24-3
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪೂರ್ವಭಾವಿ ಪರಿಶೀಲನಾ ಸಭೆ ಜರುಗಿತು.
Published on

ಬಾಗಲಕೋಟೆ: ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗಳಿಗೆ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವದಲ್ಲಿ ವಿವಿಧ ಇಲಾಖೆಗಳ ಪೂರ್ವಭಾವಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜು.೨೫ ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೊದಲ ತ್ರೈಮಾಸಿಕ
ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಲು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಯ ಅಽಕಾರಿಗಳಿಂದ ಅಭಿವೃದ್ಧಿ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಿವಿಧ ಕಾಮಗರಿಗಳು ಸದ್ಯದ ಸ್ಥಿತಿಯ ಬಗ್ಗೆ ಮಾಹಿತಿಯೊಂದಿಗೆ ಬರಬೇಕು. ನಾಮಕಾವಸ್ಥೆಗಾಗಿ ಸಭೆಗೆ ಬರದೇ ಮಾಹಿತಿಯೊಂದಿಗೆ ಹಾಜರಾಗಲು ಕಟ್ಟುನಿಟ್ಟಿನ ಸೂಚನೆ ನೀಡಿದರು

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಜಿ.ಪಂ ಮುಖ್ಯ ಯೋಜನಾಧಿಕಾರಿ ನಿರ್ಮಲ, ಯೋಜನಾ ನಿರ್ದೇಶಕ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net