ಸಂಭ್ರಮದ ಶ್ರೀ ಕೆರೆ ಕೋಡಮ್ಮ ಜಾತ್ರೆ

12blrp1
ಬೇಲೂರು ತಾಲೂಕಿನ ಕಡೇಗರ್ಜೆ ಗ್ರಾಮದ ಶ್ರೀ ಕೆರೆಕೋಡಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ಪೂಜೆ ಸಲ್ಲಿಸಿದ ಭಕ್ತರು.
Published on

ಬೇಲೂರು: ಕಡೇಗರ್ಜೆ ಗ್ರಾಮದಲ್ಲಿ ನೆಲೆಸಿರುವ ಶ್ರೀ ಕೆರೆ ಕೋಡಮ್ಮನವರ ಜಾತ್ರಾ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರದಿಂದಲೇ ವಿವಿಧ ಪೂಜಾ ಕೈಂಕರ್ಯಗಳನ್ನು ಅರ್ಚಕ ಚಂದ್ರಶೇಖರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅಕ್ಕಪಕ್ಕ ಗ್ರಾಮಗಳ ನೂರಾರು ಭಕ್ತರು ಆಗಮಿಸಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಭಕ್ತರಿಗೆ ದೇಗುಲ ಸಮಿತಿಯಿಂದ ಪ್ರಸಾದ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net