ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆ

bkt-17-1
ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಸ್ವಾತಂತ್ರೋತವ ದಿನಾಚರಣೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಽಕಾರಿ ಸಂಗಪ್ಪ ಎಂ. ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಮಂಜುನಾಥ ಡಿ ಇತರರು ಇದ್ದರು.
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಆಗಸ್ಟ ೧೫ ರಂದು ಜರುಗಲಿರುವ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಽಕಾರಿ ಸಂಗಪ್ಪ ಎಂ.ಹೇಳಿದರು.

ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಸ್ವಾತಂತ್ರೋತವ ದಿನಾಚರಣೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರೋತ್ಸವವನ್ನು ಸಂಭ್ರಮದಿAದ ಆಚರಿಸುವ ನಿಟ್ಟಿನಲ್ಲಿ ರಚಿಸಲಾದ ವಿವಿಧ ಸಮಿತಿಗಳ ಸಿದ್ದತೆ ಕುರಿತು ಚರ್ಚಿಸಿದರು. ಯಾವುದೇ ರೀತಿಯ ಲೋಪವಾಗದಂತೆ ಎಲ್ಲ ರೀತಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಧ್ವಜ ಅಂಗಡಿಗಳಲ್ಲಿ ಮಾರಾಟವಾಗದಂತೆ ನಗರಸಭೆ ನಿಗಾವಹಿಸಲು ತಿಳಿಸಿದ ಜಿಲ್ಲಾಽಕಾರಿಗಳು ಸುತ್ತೋಲೆ ಹೊರಡಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಿದರು.

ಆಗಸ್ಟ ೧೫ ರಂದು ಬೆಳಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಜಹಣ ನೆರವೇರಲಿದ್ದು, ಪೊಲೀಸ್, ಗೃಹರಕ್ಷಕದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಾಜಿ ಸೈನಿಕರ ತಂಡ ಒಳಗೊಂಡAತೆ ಆಕರ್ಷಕ ಪಥಸಂಚಲನ ಹಮ್ಮಿಕೊಳ್ಳಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಮಾಜಿ ಸೈನಿಕರಿಗೆ, ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ದೇಶಭಕ್ತಿ ಗೀತೆ ಹಾಡಿಸಲು ತಂಡಗಳನ್ನು ಆಯ್ಕೆ ಮಾಡಲು ತಿಳಿಸಿದರು.

ಕಾರ್ಯಕ್ರಮ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ವಹಿಸಿದ ಜವಾಬ್ದಾರಿಯನ್ನು ತಪ್ಪದೇ ಪಾಲಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಲು ಸೂಚಿಸಿದ ಅವರು ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೊಲೀಸ್ ಇಲಾಖೆ, ತಹಸೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಽಕಾರಿಗಳಿಗೆ ವಹಿಸಿದರೆ, ಬಂದೂಬಸ್ತಿ ವ್ಯವಸ್ಥೆಗೆ ಪೋಲಿಸ್ ಇಲಾಖೆಗೆ ತಿಳಿಸಲಾಯಿತು. ಜಿಲ್ಲಾ ಕ್ರೀಡಾಂಗಣ ಸ್ವಚ್ಛತೆಗೆ ನಗರಸಭೆಗೆ ಸೂಚಿಸಲಾಯಿತು.

ಕ್ರೀಡಾಂಗಣದಲ್ಲಿ ಸ್ಟೇಜ್ ನಿರ್ಮಾಣ, ಗಣ್ಯರಿಗೆ, ಶಾಸಕರಿಗೆ, ಸಂಸದರುಗಳಿಗೆ ಹಾಗೂ ಸನ್ಮಾನಿತರಿಗೆ, ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆ ಕೈಗೊಳ್ಳಲು ಸೂಚಿಸಿದರು. ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಮಕ್ಕಳಿಗೆ ಸಹಿ ವಿತರಣೆಗೆ ಕ್ರಮವಹಿಸಬೇಕು. ಜಿಲ್ಲಾಡಳಿತ ಭವನ ಸೇರಿದಂತೆ ತಾಲೂಕ ಆಡಳಿತ ಭವನ, ಜಿಲ್ಲಾ ಕ್ರೀಡಾಂಗಣಕ್ಕೂ ವಿದ್ಯುತ್ ಅಲಂಕಾರ ಮಾಡುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಮಂಜುನಾಥ ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net