ಸಂವಿಧಾನ ಉಳಿವಿಗೆ ಉಪಾಯ ಮತದಾನ

Aanjaneya
Published on

ಚಿತ್ರದುರ್ಗ: ಸಂವಿಧಾನ, ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ಅದನ್ನು ಉಳಿಸುವ ಉಪಾಯ ಮತದಾನದಲ್ಲಿದೆ. ಈ ನಿಟ್ಟಿನಲ್ಲಿ ಪ್ರಜೆಗಳು ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ತಾಲೂಕಿನ ಸೀಬಾರದ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಸಂವಿಧಾನ ಬದಲಿಸಲು ಹೊರಟಿದೆ. ಈಗಾಗಲೇ ಅದರ ಆಶಯಗಳಿಗೆ ದೊಡ್ಡ ಪೆಟ್ಟು ನೀಡಿದೆ. ಯಾವುದನ್ನು ಪ್ರಶ್ನೆ ಮಾಡುವಂತಿಲ್ಲ. ಸರ್ವಾಧಿಕಾರಿ ಧೋರಣೆ ಉತ್ತುಂಗದಲ್ಲಿದೆ. ಇದಕ್ಕೆ ಕಡಿವಾಣ ಹಾಕುವ ಜವಾಬ್ದಾರಿ ಮತದಾರರ ಮೇಲಿದೆ ಎಂದರು.

ಮುಖಂಡರಾದ ಆರ್.ನರಸಿಂಹರಾಜು, ಅನಿಲ್‌ಕೋಟಿ, ಈರಣ್ಣಯ್ಯ, ಜಾಲಿಕಟ್ಟೆ ತಿಪ್ಪೇಸ್ವಾಮಿ, ಬೋರನಹಳ್ಳಿ ಚೇತನ್, ತೇಕಲವಟ್ಟಿ ನಾಗರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net