ಸಂವಿಧಾನ ಓದಿ ಅರ್ಥೈಸಿಕೊಳ್ಳಿ

14Kush04
Published on

ಕುಶಾಲನಗರ: ದೇಶದ ನಾಗರಿಕರಿಗೆ ಅವಶ್ಯವಿರುವ ಪ್ರತಿಯೊಂದು ವಿಚಾರವನ್ನು ಪ್ರಸ್ತಾಪ ಮಾಡಿರುವ ಶ್ರೇಷ್ಠ ಗ್ರಂಥ ಸಂವಿಧಾನವನ್ನು ಎಲ್ಲರೂ ಓದಿ ಅರ್ಥೈಸಿಕೊಳ್ಳಿ ಎಂದು ಕುಶಾಲನಗರ ತಹಸೀಲ್ದಾರ್ ಟಿ.ಎಂ.ಪ್ರಕಾಶ್ ತಿಳಿಹೇಳಿದರು.\


ಕುಶಾಲನಗರ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದ ಬೇರೆ ಯಾವ ರಾಷ್ಟ್ರದಲ್ಲೂ ಇಲ್ಲದಿರುವಂತಹ ಸಂವಿಧಾನ ರಚಿಸಿ ವಿಶ್ವ ಖ್ಯಾತಿ ಪಡೆದಿರುವ ಮಹಾನ್ ವ್ಯಕ್ತಿ ಎಂದು ಶ್ಲಾಘಿಸಿದರು.
ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಬಾಲಕೃಷ್ಣ ರೈ, ಆರ್‌ಐ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಸಚಿನ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net