

ಬಾಗಲಕೋಟೆ: ಸಂವಿಧಾನ ಜಾರಿಗೆ ಬಂದು ೭೫ನೇ ವರ್ಷಾಚರಣೆ ಅಂಗವಾಗಿ ಸಂವಿಧಾನ ಮಹತ್ವ ಹಾಗೂ ರಾಷ್ಟಿçÃಯ ಏಕತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಜನವರಿ ೨೬ ರಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ ೭೫ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ನಂತರ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಎರಡು ಸ್ಥಬ್ದ ಚಿತ್ರಗಳು ಸಜ್ಜುಗೊಳಿಸಿ ಬಾಗಲಕೋಟೆ ಮತ್ತು ಜಮಖಂಡಿ ಉಪವಿಭಾಗದಲ್ಲಿ ಬರುವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಂಚರಿಸಲಿವೆ. ಈ ಜಾಗೃತಿ ಜಾಥಾ ಫೆಬ್ರವರಿ ೨೨ ವರೆಗೆ ನಡೆಯಲಿದ್ದು, ನಂತರ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟಿçÃಯ ಏಕತೆ ಸಮಾವೇಶದಲ್ಲಿ ಜಿಲ್ಲೆಯ ಸ್ಥಬ್ದಚಿತ್ರಗಳನ್ನು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ರಾಜ್ಯವು ತನ್ನ ಆರ್ಥಿಕ ಸಾಮರ್ಥ್ಯ ಮತ್ತು ಅಭಿವೃದ್ದಿಯ ಪರಿಮಿತಿಯಲ್ಲಿ ಉದ್ಯೋಗ ಶಿಕ್ಷಣ ಹಕ್ಕುಗಳನ್ನು ಪಡೆಯಲು ಹಾಗೂ ನಿರುದ್ಯೋಗ, ವೃದ್ದಾಪ್ಯ, ಅನಾರೋಗ್ಯ ಮತ್ತು ಅಸಮರ್ಥತೆಯ ಸಂದರ್ಭಗಳಲ್ಲಿ ಸಹಾಯ ನೀಡಲು ಪರಿಣಾಮಕಾರಿ ಅವಗೃಹು ಕಲ್ಪಿಸುವುದಲ್ಲದೇ ಇನ್ನೀತರ ಅರ್ಹ ಬೇಡಿಕೆಗಳ ಪ್ರಕರಣಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಐದು ಖಾತರಿಗಳನ್ನು ಜಾರಿಗೊಳಿಸಿದೆ. ಖಾತರಿ ಯೋಜನೆಗಳಲ್ಲಿ ಕೊನೆ ಯೋಜನೆಯಾಧ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ೫೪೦೦ ಜನ ನೊಂದಣಿ ಮಾಡಿದ್ದು, ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಲಿದ್ದಾರೆಂದು ತಿಳಿಸಿದರು.
ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಹಾನಿ ವೀಕ್ಷಿಸಲಾಗಿದೆ. ಭೇಟಿ ಸಮಯದಲ್ಲಿ ಬರದ ನಿಜ ಪರಿಸ್ಥಿತಿಯನ್ನು ಸಹ ಅರಿತಿದ್ದು, ಸೂಕ್ತ ಪರಿಹಾರಕ್ಕಾಗಿ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ ೧.೬೨ ಲಕ್ಷ ಹೆಕ್ಟೇರ್ ಕ್ಷೇತ್ರದ ವಿವಿಧ ಬೆಳೆಗಳಿಗೆ ೧,೬೨,೭೧೯ ರೈತರಿಗೆ ಪ್ರಾಥಮಿಕ ಹಂತದಲ್ಲಿ ೩೨.೨೬ ಕೋಟಿ ರೂ.ಗಳ ಪರಿಹಾರ ಜಮೆ ಮಾಡಲಾಗಿದೆ ಎಂದರು.
ಪ್ರತಿ ತಿಂಗಳು ೨ ಸಾವಿರ ರೂ.ಗಳನ್ನು ನೀಡುವ ಗೃಹಲಕ್ಷಿö್ಮÃ ಯೋಜನೆಯಡಿ ಜಿಲ್ಲೆಯಲ್ಲಿ ೩.೮೮ ಲಕ್ಷ ಫಲಾನುಭವಿಗಳು ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಒಟ್ಟು ೪,೨೭,೮೦೫ ಗೃಹ ಬಳಕೆಯ ಸಂಪರ್ಕಗಳಿದ್ದು, ೪,೦೭,೧೬೧ ಜನ ನೋಂದಾಯಿಸಿದ್ದಾರೆ. ೨೦೦ ಯುನಿಟ್‌ಗಿಂತ ಕಡಿಮೆ ಬಳಕೆ ಮಾಡುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಗೃಹಬಳಕೆ ಸ್ಥಾವರಗಳ ಸಂಖ್ಯೆ ೪,೨೦,೭೨೮ ಇವೆ. ಡಿಸೆಂಬರ ತಿಂಗಳಲ್ಲಿ ಒಟ್ಟು ೧೫.೫೦ ಕೋಟಿ ಅನುದಾನ ಅಂದಾಜಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ೫ ಕೆ.ಜಿ. ಅಕ್ಕಿಯ ಬದಲಾಗಿ ಪ್ರತಿ ಫಲಾನುಭವಿಗಳಿಗೆ ೧೭೦ ರೂ. ಗಳಂತೆ ಜುಲೈ-೨೩ ಮಾಹೆಯಿಂದ ಡಿಸೆಂಬರ್ ಮಾಹೆವರೆಗೆ ೩,೫೮,೫೮೬ ಪಡಿತರ ಚೀಟಿ ಫಲಾನುಭವಿಗಳಿಗೆ ಜಮೆ ಮಾಡಿ, ್ಲ ಶೇ.೯೨.೭೫ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ಜಿಲ್ಲೆಯಲ್ಲಿರುವ ಬಾದಾಮಿ, ಪಟ್ಟದಕಲ್ಲ ಹಾಗೂ ಐಹೊಳೆ ಪ್ರವಾಸಿ ತಾಣಗಳ ಸಂರಕ್ಷಣೆಗೆ ರಚಿಸಲಾದ ಚಾಲುಕ್ಯ ಪ್ರಾಧಿಕಾರಕ್ಕೆ ಮರು ಜೀವ ನೀಡಲಾಗಿದ್ದು, ಐಹೊಳೆ ತಾಣದಲ್ಲಿರುವ ೧೧೪ ಮನೆಗಳ ಸ್ಥಳಾಂತರಕ್ಕೆ ಕ್ರಮವಹಿಸಾಗುತ್ತಿದೆ. ಅಲ್ಲದೇ ಐಹೊಳೆಯಲ್ಲಿ ೫೦ ಕೊಠಡಿಗಳುಳ್ಳ ೨ ಸ್ಟಾರ್ ಮಾದರಿಯ ಹೋಟೆಲ್ ನಿರ್ಮಾಣ ಮಾಡಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ನಿರ್ಣಯಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮ ಜರುಗಿದವು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ, ಹನಮಂತ ನಿರಾಣಿ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಶಶಿಧರ ಕುರೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.