ಸಂವಿಧಾನ ಜಾಗೃತಿಗೆ ಉತ್ತಮ ಸ್ಪಂದನೆ

Samvidhana
Published on

ಚಿತ್ರದುರ್ಗ: ಸಂವಿಧಾನ ಜಾಗೃತಿ ಜಾಥಾಕ್ಕೆ ಜಿಲ್ಲೆಯ ಎಲ್ಲೆಡೆ ಸಾರ್ವಜನಿಕ ವಲಯದಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾಥಾ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಸಂವಿಧಾನದ ಆಶಯ ಮತ್ತು ಮೌಲ್ಯ ಪ್ರದರ್ಶಿಸುವ ಎಲ್‌ಇಡಿ ಪರದೆ ಹೊಂದಿರುವ ಸ್ತಬ್ಧಚಿತ್ರವು ಜಿಲ್ಲೆಯ ಎಲ್ಲ ಗ್ರಾಪಂ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಫೆ. 23ರವರೆಗೆ ಸಂಚರಿಸಲಿದೆ ಎಂದರು.

ಪ್ರತಿ ಗ್ರಾಮದಲ್ಲೂ ಸ್ಥಬ್ಧಚಿತ್ರ ಜನರ ಮನಸ್ಸನ್ನು ಗೆಲ್ಲುವುದರ ಜೊತೆಗೆ ಸಂವಿಧಾನ ಮಹತ್ವ ಸಾರುತ್ತಿದೆ. ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯವೂ ನಡೆಯುತ್ತಿದೆ. ಜಾಥಾ ಸಾಗುವ ಮಾರ್ಗಗಳಲ್ಲಿ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ಸಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್‌ಹೆಬ್ಬಳ್ಳಿ ಮಾತನಾಡಿ, ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿ, ಆನಿವಾಳ, ಬಾಗೂರು, ಸಾಣೇಹಳ್ಳಿ, ಬೋಕಿಕೆರೆ, ಹೊಸದುರ್ಗ ಕಸಬಾ, ಕೆಲ್ಲೋಡು ಗ್ರಾಪಂ ವ್ಯಾಪ್ತಿಯಲ್ಲಿ ಸಂಚರಿಸಿತು. 15ರಂದು ಕಂಗುವಳ್ಳಿ, ಬಲ್ಲಾಳಸಮುದ್ರ, ಕಬ್ಬಳ, ಬೆಲಗೂರು, ಹೆಗ್ಗೆರೆ, ಕುರುಬರಹಳ್ಳಿ, ತಂಡಗ ಗ್ರಾಮಗಳಲ್ಲಿ ಸಂಚರಿಸಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net