

ಬಾಗಲಕೋಟ: ಭಾರತ ದೇಶವು ಗಣ ರಾಜ್ಯವಾಗಿ 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಾದ್ಯಂತ “ಸಂವಿಧಾನ ಜಾಗೃತಿ ಜಾಥ” ಆಯೋಜಿಸಿದ್ದು, ಇದರ ಅಂಗವಾಗಿ ಶುಕ್ರವಾರ ಸಂಜೆ ಜಿಲ್ಲಾಡಾಳಿತ ಭವನ ಆವರಣದಲ್ಲಿರುವ Dr. B R ಅಂಬೇಡ್ಕರ ಪುತ್ತಳಿ ಹತ್ತಿರ ಬಾಗಲಕೋಟೆ ಜಿಲ್ಲೆಯಲ್ಲಿ ಸಂಚಾಸಲಿರುವ ಸಂವಿಧಾನ ಜಾಗೃತಿ ಜಾಥಾ ಸ್ತಬ್ದಚಿತ್ರಕ್ಕೆ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ R B ತಿಮ್ಮಾಪುರ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜನವರಿ 26 ರಿಂದ ಫೆಬ್ರವರಿ 23ರ ವರೆಗೆ ಎರಡು ಸ್ತಬ್ಧಚಿತ್ರಗಳ ಮೆರವಣಿಗೆಯ ಮೂಲಕ ಬಾಗಲಕೋಟೆ ಮತ್ತು ಜಮಖಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯತಿ ಮತ್ತು ನಗರ ಪಟ್ಟಣ ಪ್ರದೇಶದಲ್ಲಿ ಸಂಚರಿಸಿ ಸಂವಿಧಾನ ಪೀಠಿಕೆ ಮತ್ತು ಅದರಲ್ಲಿನ ಅಂಶಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಗಳು ಭಾರತದ ಸಂವಿಧಾನ ಪೀಠಿಕೆ ವಾಚನ, ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕುರಿತ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ ಮತ್ತು ಕರ್ನಾಟಕ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪರಿಚಯಸಲಿವೆ.