ಸಂವಿಧಾನ ಪೀಠಿಕೆ ಓದು

15 gkp. 01
Published on

ಗೋಣಿಕೊಪ್ಪ: ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ಆಶಯದಂತೆ ಮುನ್ನಡೆಯಬೇಕು ಎಂದು ಪೊನ್ನಂಪೇಟೆ ತಹಸೀಲ್ದಾರ್ ಪ್ರಶಾಂತ್ ಹೇಳಿದರು.
ಪೊನ್ನಂಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜನೆಗೊಂಡಿದ್ದ ಭಾರತದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನವನ್ನು ಅರ್ಥೈಸಿಕೊಂಡು ಮುನ್ನಡೆದರೆ ದೇಶ ಸುಭಿಕ್ಷವಾಗುತ್ತದೆ. ಇದಕ್ಕೆ ಎಲ್ಲರ ಸಹಕಾರ, ಸಹಮತ ಅಗತ್ಯ ಎಂದರು.
ಸಂವಿಧಾನದ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಏಕಕಾಲದಲ್ಲಿ ಭಾರತ ಸಂವಿಧಾನ ಪೀಠಿಕೆ ಓದು ಎಂಬ ಕಾರ್ಯಕ್ರಮ ಆಯೋಜನೆಗೆ ನಿರ್ದೇಶನ ನೀಡಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಸಂವಿಧಾನದ ಆಶಯ ಈಡೇರಿಸೋಣ ಎಂದರು.
ತಾಪಂ ಇಒ ಅಪ್ಪಣ್ಣ, ಅಕ್ಷರದಾಸೋಹ ಅಧಿಕಾರಿ ರಾಜೇಶ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕವಿತಾ, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ನಾಗರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಬೀನಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ರೀನಾ, ಡಾ.ಶಾಂತೇಶ್, ಕಂದಾಯ ಅಧಿಕಾರಿ ಸುಧೀಂದ್ರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net