ಸಂವಿಧಾನ ಪ್ರತಿಯೊಬ್ಬರಿಗೂ ಅಗತ್ಯ

27BK2
ಬಸವಕಲ್ಯಾಣ ತಾಲೂಕಿನ ಪರ್ತಾಪುರದಲ್ಲಿ ಆಯೋಜಿಸಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ದಿಲೀಪಕುಮಾರ ಉತ್ತಮ ಮಾತನಾಡಿದರು. ಪೂಜ್ಯ ರವೀಂದ್ರ ಗುರೂಜಿ, ಗ್ರಾಪಂ ಅಧ್ಯಕ್ಷೆ ಶೋಭಾ ಮೇತ್ರೆ, ಪ್ರಮುಖರಾದ ಪಿಂಟು ಕಾಂಬಳೆ, ಸಂತೋಷ ಚವ್ಹಾಣ, ಶೇಷರಾವ ಗಾಯಕವಾಡ ಇತರಿರಿದ್ದರು.
Published on

ಬಸವಕಲ್ಯಾಣ: ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಅತೀ ಅವಶ್ಯಕವಾಗಿದೆ. ಸಂವಿಧಾನದ ಪೀಠಿಕೆಯಲ್ಲಿರುವ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೂಲ ಸ್ಥಾಯಿಭಾವವನ್ನು ಅರ್ಥಮಾಡಿಕೊಳ್ಳುವುದು ನಮ್ಮೆಲ್ಲರ ಆದ್ಯತೆಯಾಗಬೇಕಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿಲೀಕುಮಾರ ಉತ್ತಮ ಹೇಳಿದರು.

ಪರ್ತಾಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪಂಚ ಕಮಿಟಿ ಟ್ರಸ್ಟ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಸ್ಮಿತೆಗಳ ಭೇದವಿಲ್ಲದ, ಸಹಬಾಳ್ವೆಯ ಧ್ಯೋತಕವಾದ ಸಮಾಜವನ್ನು ನಿರ್ಮಿಸುವ ಮೂಲಕ ಎಲ್ಲರನ್ನೂ ಒಳಗೊಳ್ಳುವ ಸಮಾಜದ ನಿರ್ಮಾಣಕ್ಕಾಗಿ ಪಣತೊಡುವುದು ವರ್ತಮಾನ ಭಾರತದ ಪ್ರಥಮ ಆದ್ಯತೆಯಾಗಬೇಕಿದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಸಂವಿಧಾನದ ಪೀಠಿಕೆಯನ್ನು ಶಿಕ್ಷಕ ಶಿವಕುಮಾರ ಬಿರಾದಾರ ಬೋಧಿಸಿದರು. ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಂತೋಷ ಚವ್ಹಾಣ್, ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ತಾಲೂಕು ಅಧ್ಯಕ್ಷ ಪಿಂಟು ಕಾಂಬಳೆ ಮಾತನಾಡಿದರು.

ಪೂಜ್ಯ ರವೀಂದ್ರ ಗುರೂಜಿ, ಗ್ರಾಪಂ ಅಧ್ಯಕ್ಷೆ ಶೋಭಾ ಮೇತ್ರೆ, ಪಿಡಿಒ ಚಂದ್ರಮ ಧೂಳಖೇಡ, ಪಂಚ ಕಮಿಟಿ ಅಧ್ಯಕ್ಷ ಶೇಷರಾವ ಗಾಯಕವಾಡ, ಕಾರ್ಯದರ್ಶಿ ಭಾವರಾವ ಕಾಂಬಳೆ, ನಾಗೇಶ ಕಾಂಬಳೆ, ಮನೋಹರ ಕಾಂಬಳೆ, ದತ್ತಾತ್ರೇಯ ಸೂರ್ಯವಂಶಿ, ರವಿ ಕಾಂಬಳೆ, ಭಾಗ್ಯವಾನ ಗಾಯಕವಾಡ, ಬಾಲಾಜಿ ಕಾಂಬಳೆ, ಸಂದೇಶ ಕಾಂಬಳೆ, ಪ್ರಭಾವತಿ ಗಾಯಕವಾಡ, ಸವಿತಾ ಗಾಯಕವಾಡ ಇತರರಿದ್ದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿಲೀಪಕುಮಾರ ಉತ್ತಮ, ರಾಜ್ಯ ಪರಿಷತ್ ಸದಸ್ಯ ಸಂತೋಷ ಚವ್ಹಾಣ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿಬದಿ ವ್ಯಾಪಾರಿಗಳ ವಿಭಾಗದ ತಾಲೂಕು ಅಧ್ಯಕ್ಷ ಪಿಂಟು ಕಾಂಬಳೆ, ಮಾನವ ಬಂಧುತ್ವ ವೇದಿಕೆ ತಾಲೂಕು ಘಟಕದ ಉಪಾಧ್ಯಕ್ಷ ಗೌತಮ ಖರ್ಗೆ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net