ಸಂವಿಧಾನ ಬದಲಿಸಲು ಬಿಡಬಾರದು

Ambedkar 2
Published on

ಚಿತ್ರದುರ್ಗ: ಕೋಮುವಾದಿಗಳು ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿದ್ದು, ಇದಕ್ಕೆ ಎಂದಿಗೂ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಸಲಹೆ ನೀಡಿದರು.

ಪಕ್ಷದ ಕಚೇರಿಯಲ್ಲಿ ನಡೆದ ಅಂಬೇಡ್ಕರ್‌ ಪರಿನಿಬ್ಬಾಣ ದಿನಾಚರಣೆಯಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಎಸ್ಸಿ, ಎಸ್ಟಿ ಸಮುದಾಯಕ್ಕಷ್ಟೇ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದಾರೆಂಬ ತಪ್ಪು ಕಲ್ಪನೆ ಅನೇಕರಲ್ಲಿದ್ದು, ಅದನ್ನು ಮೊದಲು ಹೋಗಲಾಡಿಸಬೇಕು ಎಂದರು.

ದಲಿತ ಮುಖಂಡ ಬಿ.ರಾಜಣ್ಣ ಮಾತನಾಡಿ, ವಿಶ್ವಾದ್ಯಂತ ಪರಿನಿರ್ವಾಣ ದಿನದ ಮೂಲಕ ಅಂಬೇಡ್ಕರ್ ಅವರನ್ನು ಸ್ಮರಿಸಲಾಗುತ್ತಿದೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಸಂವಿಧಾನದ ಮೂಲಕ ಶಕ್ತಿ ನೀಡಿದ್ದಾರೆ ಎಂದರು.

ಕಾಂಗ್ರೆಸ್ ಎಸ್ಸಿ ವಿಭಾಗದ ಅಧ್ಯಕ್ಷ ಜಯಣ್ಣ ಮೊಗಲಹಳ್ಳಿ ಮಾತನಾಡಿ, ಶಿಕ್ಷಣ, ರಾಜಕೀಯ, ಸಂಘಟನೆಯಿಂದ ಪ್ರಗತಿ ಸಾಧ್ಯವೆಂಬ ಅಂಬೇಡ್ಕರ್ ಅವರ ಮಾತು ಇಂದಿಗೂ ಪ್ರಸ್ತುತ. ಈ ನಿಟ್ಟಿನಲ್ಲಿ ಯುವಸಮೂಹ ನಿರಂತರ ಪ್ರಯತ್ನದೊಂದಿಗೆ ಅಭಿವೃದ್ಧಿ ಸಾಧಿಸಿ ಎಂದು ಸಲಹೆ ನೀಡಿದರು.

ವಕೀಲ ಮಲ್ಲೇಶ್, ಪಕ್ಷದ ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಮುಖಂಡರಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‌ಕುಮಾರ್, ರೇಣುಕಾ ಶಿವು, ಎಚ್.ಅಂಜಿನಪ್ಪ, ಕೋಟಿ, ಸೈಯದ್ ಖುದ್ದೂಸ್, ಚಾಂದ್‌ಪೀರ್, ಶಬ್ಬೀರ್ ಬಾಷಾ, ಸೈಯದ್ ಸೈಫುಲ್ಲಾ, ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net