ಸಂವಿಧಾನ ಬದ್ಧ ಹಕ್ಕು ನೀಡಿ

bkt-14-5
ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನ ಎದುರು ಕರ್ನಾಟಕ ರಾಜ್ಯ ತಳವಾರ ಮಹಸಭಾ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಽಕಾರಿ ಜಾನಕಿ ಕೆ.ಎಂ ಅವರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
Published on

ಬಾಗಲಕೋಟೆ: ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ನೀಡಿ ಸಂವಿಧಾನ ಬದ್ಧ ಹಕ್ಕು ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ತಳವಾರ ಮಹಸಭಾ ವತಿಯಿಂದ ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿಸಲಾಯಿತು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಮುದಾಯದ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಽಕಾರಿ ಜಾನಕಿ ಕೆ.ಎಂ ಅವರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮಹಸಭಾದ ಜಿಲ್ಲಾಧ್ಯಕ್ಷ ಚಿನ್ನಪ್ಪ ಅಂಬಿ ಮಾತನಾಡಿ, ಸಂವಿಧಾನ ಬದ್ಧವಾಗಿರುವ ತಳವಾರ ಸಮುದಾಯದವರಿಗೆ ಎಸ್ಟಿ ಪ್ರಮಾಣಪತ್ರ ನೀಡಲು ಅಽಕಾರಿಗಳು ಒಂದು ಸಮುದಾಯದ ಮಾತು ಕೇಳಿ ಹಿಂದೇಟು ಹಾಕುತ್ತಿದ್ದಾರೆ. ಉಚ್ಚ ನ್ಯಾಯಾಲಯ ತೀರ್ಪಿನ ಅನುಸಾರ ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿದ್ದಾರೆ. ವಾಲ್ಮೀಕಿ ನಾಯಕ ಜನಾಂಗದವರು ತಳವಾರರಿಗೆ ಎಸ್ಟಿ ಪ್ರಮಾಣ ಪತ್ರ ನೀಡದಂತೆ ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನ ಬದ್ಧ ಹಕ್ಕು ನೀಡಲು ಯಾರು ಅಡೆತಡೆ ಮಾಡಬಾರದು ಎಂದರು.

ನಮ್ಮ ಸಮುದಾಯವು ಸಂವಿಧಾನ ಬದ್ಧವಾಗಿದ್ದು, ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿದೆ. ಆದರೆ ವಾಲ್ಮೀಕಿ ಸಮುದಾಯದ ವಿರೋಧದಿಂದ ಪ್ರತ್ಯೇಕವಾಗಿ ಎಸ್ಟಿ ಪ್ರಮಾಣ ಪತ್ರ ನೀಡುವಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ತಳವಾರ ಸಮುದಾಯದವರಿಗೆ ತಕ್ಷಣ ಎಸ್ ಟಿ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಽಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಪ್ರಭು ಗಸ್ತಿ, ಭೀಮಸಿ ಹುನ್ನೂರ, ಸಿದ್ರಾಮೇಶ ಮೀಸಿ, ಭೀಮಸಿ ತಳವಾರ, ಶಿವಾನಂದ ದೇಸಾಯಿ, ಸಂಗಮೇಶ ನಾಗನೂರ, ಬಸವರಾಜ ಸೋಮಪುರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net