ಸಂವಿಧಾನ ಭಾರತೀಯರಿಗೆ ರಕ್ಷಾಕವಚ

nrp ambed
ಎನ್.ಆರ್.ಪುರ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಡಾ. ಕೆ.ಪಿ.ಅಂಶುಮಂತ್, ಜುಬೇದಾ, ಪ್ರಶಾಂತ್ ಎಲ್. ಶೆಟ್ಟಿ, ದೇವಂತ್ ಗೌಡ, ಎಚ್.ಎಂ.ಶಿವಣ್ಣ, ಸುನೀಲ್‌ಕುಮಾರ್, ಎಂ.ಮಹೇಶ್ ಇತರರಿದ್ದರು.
Published on

ಎನ್.ಆರ್.ಪುರ: ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಪ್ರತಿ ಭಾರತೀಯನಿಗೂ ರಕ್ಷಾ ಕವಚವಿದ್ದಂತೆ ಎಂದು ಭದ್ರಾ-ಕಾಡಾ ಅಧ್ಯಕ್ಷ ಕೆ.ಪಿ.ಅಂಶುಮಂತ್ ಹೇಳಿದರು.

ತಾಲೂಕು ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ಪ್ರತಿಯೊಬ್ಬರೂ ದೇಶದ ಅಭಿವೃದ್ಧಿಯಲ್ಲಿ ಭಾಗವಹಿಸಲು ಸಂವಿಧಾನ ಜವಾಬ್ದಾರಿ ನೀಡಿದೆ. ಸಂವಿಧಾನವನ್ನು ರಕ್ಷಣೆ ಮಾಡಿದರೆ, ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತದೆ. ಸಂವಿಧಾನದ ಆಶಯಗಳು ಹಾಗೂ ಕಾಂಗ್ರೆಸ್ ತತ್ವ ಸಿದ್ಧಾಂತಗಳು ಎರಡೂ ಒಂದೇ ಆಗಿದೆ. ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಿಕೊಂಡು ಬಂದಿದೆ. ಪ್ರತಿಯೊಬ್ಬರೂ ಜೀವನದಲ್ಲಿ ಅಂಬೇಡ್ಕರ್ ಅವರ ಆದರ್ಶ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರನ್ನ್ನೂ ರಕ್ಷಣೆ ಮಾಡುತ್ತಿರುವ ಸಂವಿಧಾನಕ್ಕೆ ಚಿರ ಋಣಿಯಾಗಿರಬೇಕು. ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ಆದರ್ಶಗಳನ್ನು, ಮಹಾತ್ಮ ಗಾಂಧೀಜಿ ಅವರ ತತ್ವದ ಅರಿವು ಮೂಡಿಸಲು ಜೈಬಾಪು, ಜೈಭೀಮ್, ಜೈ ಸಂವಿಧಾನ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ಕೊಪ್ಪ ಎಪಿಎಂಸಿ ನಿರ್ದೇಶಕ ಎಚ್.ಎಂ.ಶಿವಣ್ಣ ಮಾತನಾಡಿ, ಅಂಬೇಡ್ಕರ್ ಮಹಾನ್ ಮಾನವತಾವಾದಿ, ವಿಶ್ವಜ್ಞಾನಿಯಾಗಿದ್ದರು. ಅಂಬೇಡ್ಕರ್ ಅವರ ಕೊಡುಗೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್. ಶೆಟ್ಟಿ ಮಾತನಾಡಿ, ಶೋಷಿತರ ಪರ ಹೋರಾಟ ಮಾಡುವ ಮೂಲಕ, ಅವರಿಗೆ ಅನುಕೂಲವಾಗುವ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಸಂವಿಧಾನವನ್ನು ಎತ್ತಿ ಹಿಡಿಯುತ್ತಿದೆ. ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಬುದ್ಧನ ಪೂರ್ಣಿಮೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.

ಬಗರ್ ಹುಕುಂ ಸಮಿತಿ ಅಧ್ಯಕ್ಷ ಇ.ಸಿ.ಜೋಯಿ, ಪಪಂ ಅಧ್ಯಕ್ಷೆ ಜುಬೇದಾ ಮಾತನಾಡಿದರು. ತಾಲೂಕು ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ದೇವಂತ್ ಗೌಡ, ಉಮಾ ಕೇಶವ್, ಸುರಯ್ಯಬಾನು, ಕೆ.ವಿ.ಸಾಜು, ಏಲಿಯಾಸ್, ಸುಬ್ರಹ್ಮಣ್ಯ, ಶ್ರೀಧರ್, ಉಪೇಂದ್ರ, ಅಂಜುಮ್, ಎಂ.ಮಹೇಶ್, ಸುನೀಲ್‌ಕುಮಾರ್, ಪ್ರವೀಣ್, ಚಿತ್ರಪ್ಪಯರಬಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net