ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ

Congress
Published on

ಚಿತ್ರದುರ್ಗ: ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದ ಅಗತ್ಯವಿದೆ. ಹೀಗಾಗಿ ಅದರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಹೇಳಿದರು.

ಪಕ್ಷದ ಕಚೇರಿಯಲ್ಲಿ ಸೋಮವಾರ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸೆಲ್‌ನಿಂದ ಹಮ್ಮಿಕೊಂಡಿದ್ದ ಸಂವಿಧಾನ ರಕ್ಷ ಆಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ನಾಯಕರು ಅಂಬೇಡ್ಕರ್ ಅವರನ್ನು ಕಾಂಗ್ರೆಸ್ಸಿಗರು ಚುನಾವಣೆಯಲ್ಲಿ ಸೋಲಿಸಿದರೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ನಿಖರ ಕಾರಣ ಏನೆಂಬುದನ್ನು ತಿಳಿಸುವ ಕೆಲಸ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಆಗಬೇಕು ಎಂದು ಸಲಹೆ ನೀಡಿದರು.

ಜನರಿಗೆ ಸಂವಿಧಾನದ ಕುರಿತು ತಿಳಿವಳಿಕೆ ನೀಡುವ ಕಾರ್ಯವನ್ನು ದೆಹಲಿಯಿಂದ ಆರಂಭಿಸಿ, ದೇಶದ ಪ್ರತಿ ಗ್ರಾಮದಲ್ಲೂ ನಡೆಸಲಾಗುವುದು. ಜ. 26ರಂದು ಇದಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ, ಬಿಜೆಪಿಗರು ಸಂವಿಧಾನದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಕುರಿತು ಎಚ್ಚರವಹಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಪಕ್ಷದ ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮುಖಂಡರಾದ ಹಾಲಸ್ವಾಮಿ, ಸಂಪತ್‌ಕುಮಾರ್, ಎಸ್‌ಎಂಎಲ್ ತಿಪ್ಪೇಸ್ವಾಮಿ, ಬಿ.ಮಂಜುನಾಥ್, ಎಸ್.ಜಯಣ್ಣ, ಸೈಯದ್ ಖುದ್ದೂಸ್, ಎನ್.ಡಿ.ಕುಮಾರ್, ಖಾಸಿಂ ಆಲಿ, ಲೋಕೇಶ್, ಚೋಟು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net