

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹುಟ್ಟುಹಬ್ಬ ಅಂಗವಾಗಿ ಶನಿವಾರ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ನಗರದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನಗರದ ನೀಲಬಾಗಿಲು ಶ್ರೀ ಆಂಜನೇಯ ಸ್ವಾಮಿ ದೇವಾಲಯ ದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಅಜಾದ್ ರಸ್ತೆಯ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ನಂತರ ಮಾತನಾಡಿದ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ , ನಮ್ಮ ನಾಯಕರಾದಂತಹ ಸಂಸದ ಪ್ರಜ್ವಲ್ ರೇವಣ್ಣ ಅವರ ಹುಟ್ಟು ಹಬ್ಬದ ಅಂಗವಾಗಿ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸದ್ದು,ಅವರಿಗೆ ಭಗವಂತ ಹೆಚ್ಚಿನ ಆರೋಗ್ಯ, ಭಾಗ್ಯ ಮತ್ತು ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಯುವ ಮೂಲಕ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿಗೆ ಅವರಿಂದ ಕೊಡುಗೆ ಸಿಗಲಿ ಎಂದು ಆಶಿದರು.
ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಎಸ್.ರಘುಗೌಡ,ಜಿಲ್ಲಾ ಜೆಡಿಎಸ್ ವಕ್ತಾರ ಹೊಂಗೆರೆ ರಘು ,ಹಾಸನ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಆಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್.ಮಂಜೇಗೌಡ, ಜಿ.ಪಂ.ಮಾಜಿ ಉಪಾಧ್ಯಕ್ಷ ,ದುದ್ದ ಲಕ್ಷ್ಮೇಗೌಡ, ನಗರಸಭೆ ಸದಸ್ಯರಾದ ಶಂಕರ್ , ನವೀನ್ , ರಪೀಕ್ , ಸೈಯದ್ ಅಕ್ಬರ್, ಮುಖಂಡರಾದ ಕಾರ್ಲೆ ಇಂದ್ರೇಶ್, ಹೊನ್ನವಳ್ಳಿ ಸತೀಶ್ , ಮೊಗಣ್ಣಗೌಡ , ದಾಸರಕೊಪ್ಪಲು ಕುಮಾರ್, ಮಾರ್ಗೋಡನಹಳ್ಳಿ ರಾಜು, ದೊಡ್ಡಬಾಗನಹಳ್ಳಿ ನಿಂಗೇಗೌಡ ಹಾಗೂ ಇತರರು ಇದ್ದರು