ಸಂಸದರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಸಂಸದರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ
Published on

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಎಸ್‌ಐಟಿ ತಂಡ ನಗರದ ಸಂಸದರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿತು.
ಬೆಂಗಳೂರಿನಿಂದ ಮಧ್ಯಾಹ್ನ 12 ಹಾಸನ ನಗರಕ್ಕೆ ಪ್ರಜ್ವಲ್ ರೇವಣ್ಣರನ್ನು ಕರೆ ತಂದ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಸುಮಾರು 4 ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು ನಡೆಸಿ ಮತ್ತೆ ಬೆಂಗಳೂರಿಗೆ ಕರೆದುಕೊಂಡು ಹೋದರು.
ವಿರುದ್ಧ ದಾಖಲಾಗಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಪ್ರಜ್ವಲ್ ಸಂಸದರಾಗಿದ್ದಾಗ ಇದೇ ಸರ್ಕಾರಿ ನಿವಾಸದಲ್ಲಿ ಪ್ರಜ್ವಲ್ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತ ಮಹಿಳೆಯೊಬ್ಬರು ದೂರು ನೀಡಿರುವುದರಿಂದ ಸಿಐಡಿ ಎಸ್ಪಿ ನೇತೃತ್ವದಲ್ಲಿ ಮತ್ತೊಮ್ಮೆ ಸ್ಥಳ ಮಹಜರ್ ನಡೆಸಲಾಯಿತು.
ಇದೇ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ರನ್ನು ಬಾಡಿ ವಾರೆಂಟ್ ಪಡೆದು ಇಲ್ಲಿಗೆ ಕರೆತಲಾಗಿತ್ತು. ತನಿಖಾ ತಂಡದ ಜೊತೆಗೆ ಎಫ್‌ಎಸ್‌ಎಲ್ ತಂಡವೂ ನಿವಾಸದ ವಿವಿಧೆಡೆ ಅವಲೋಕನ ನಡೆಸಿತು. ಈ ವೇಳೆ ಪ್ರಜ್ವಲ್‌ರಿಂದ ಹೇಳಿಕೆ ಪಡೆದು ಮಾಹಿತಿ ರೆಕಾರ್ಡ್ ಮಾಡಿಕೊಳ್ಳಲಾಯಿತು. ಕಳೆದ ಮೇ 4 ರಂದು ಸಂತ್ರಸ್ತ ಮಹಿಳೆ ಕರೆ ತಂದು ಮಹಜರ್ ನಡೆಸಿದ್ದ ಎಸ್‌ಐಟಿ, ಇಂದು ಮಾಜಿ ಸಂಸದನನ್ನು ಕರೆ ತಂದಿತ್ತು. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮಹಜರು ನಡೆಸಲಾಯಿತು. ಸತತ 4 ಗಂಟೆ ಕಾಲ ಸ್ಥಳ ಮಹಜರ್ ಮುಗಿದ ನಂತರ ಪ್ರಜ್ವಲ್ ಅವರನ್ನು ಜೀಪಿನಲ್ಲಿ ಕೂರಿಸಿಕೊಂಡು ಎಸ್‌ಐಟಿ ತಂಡ ಬೆಂಗಳೂರು ಕಡೆಗೆ ಹೊರಟಿತು. ಜೀಪು ಹೊರಡುವ ವೇಳೆ ಪ್ರಜ್ವಲ್ ಯಾರಿಗೂ ಮುಖ ತೋರಿಸದೇ ಕತ್ತು ಬಗ್ಗಿಸಿ ಕುಳಿತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net