ಸಂಸ್ಕಾರ ಅಳವಡಿಸಿಕೊಂಡರೆ ಉತ್ತಮ ಭವಿಷ್ಯ

26Kush01
Published on

ಕುಶಾಲನಗರ: ಸಂಸ್ಕಾರ ಅಳವಡಿಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಶಾಲೆಯ ಮುಖ್ಯಸ್ಥೆ ಸಿಸ್ಟರ್ ಸ್ಪಂದನ ಸಲಹೆ ನೀಡಿದರು.

ಕುಶಾಲನಗರದ ಫಾತಿಮಾ ಕಾನ್ವೆಂಟ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹಲವು ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶನಿವಾರ ಶಾಲೆಯ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ಮತ್ತು ಟ್ರೋಫಿಗಳನ್ನು ವಿತರಿಸಿ ಮಾತನಾಡಿದರು.

ಮಕ್ಕಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಸಕ್ರಿಯವಾಗಿ ಪಾಲ್ಗೊಂಡು ದೃಹಕ ಸದೃಢವಾಗಬೇಕು. ವಿದ್ಯಾರ್ಥಿಗಳು ಮಹಾನ್ ನಾಯಕರನ್ನು ಮಾದಿರಿಯಾಗಿಟ್ಟುಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು. ವಿವಿಧ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳೊಂದಿಗೆ ಶಿಕ್ಷಕಿ ಕವಿತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net