ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಮುನ್ನಡೆಯಬೇಕು: ಎಚ್.ಎಲ್. ಮಲ್ಲೇಶ್ ಗೌಡ

ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಮುನ್ನಡೆಯಬೇಕು: ಎಚ್.ಎಲ್. ಮಲ್ಲೇಶ್ ಗೌಡ
Published on

ಹಾಸನ: ನಮ್ಮ ನಾಡಿನ ಉಡುಗೆ- ತೊಡಿಗೆಯನ್ನು ಹೆಚ್ಚು ಬಿಂಬಿಸುವ ಕೆಲಸವನ್ನು ಸುಜಲಾ ಕಾಲೇಜು ವಿದ್ಯಾರ್ಥಿಗಳು ಮಾಡಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ ತಿಳಿಸಿದರು.

ನಗರದ ಅರಳಿಕಟ್ಟೆ ವೃತ್ತದ ಬಳಿ ಇರುವ ಸಂಸ್ಕೃತ ಭವನದಲ್ಲಿ ಪ್ರತಿವರ್ಷದಂತೆ ಸುಜಲಾ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಈ ವರ್ಷವು ಬುಧವಾರ ಹಮ್ಮಿಕೊಂಡಿದ್ದ ಯತ್ನಿಕ್ ಡೇ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ನಾಡಿನ ಸಂಸ್ಕೃತಿಯನ್ನು ಮರೆಯುವಂತಿಲ್ಲ. ಹಿಂದಿನ ಕಾಲದಲ್ಲಿ ಹಿರಿಯರು ಬಿಟ್ಟು ಹೋದ ಸಂಸ್ಕೃತಿಯನ್ನು ನಾವುಗಳು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ. ಹಾಗೇ ಮುಂದಿನ ಜನಾಂಗಕ್ಕೂ ಕೂಡ ಅದನ್ನು ಉತ್ತಮ ರೀತಿ ಕೊಂಡೊಯ್ಯಬೇಕು ಎಂದು ಸಲಹೆ ನೀಡಿದರು.

ಯತ್ನಿಕ್ ಡೇ ಅಂಗವಾಗಿ ರಕ್ತದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಜೀನ್ಸ್ ಪಂಚೆ, ಬಿಳಿ ಶರಟು ಹಾಗೂ ಸೀರೆ ತೊಡುವ ಮೂಲಕ ನಾಡಿನ ಸಂಸ್ಕೃತಿಯನ್ನು ಮರುಕಳಿಸಿದರು. ಇದೇ ವೇಳೆ ಸುಜಲಾ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್ ರಕ್ತದಾನ ಮಾಡಿದರು. ಕಾಲೇಜಿನ ವಿದ್ಯಾರ್ಥಿಗಳು ಕೂಡ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೆರದಿದ್ದವರ ಮನ ಸೆಳೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net