

ನೆಲಮಂಗಲ: ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕರವೇ ಅಧ್ಯಕ್ಷ ಪ್ರವೀಣ್‌ಕುಮಾರ್‌ಶೆಟ್ಟಿ ತಿಳಿಸಿದರು.
ನಗರದ ಬಸ್ ನಿಲ್ದಾಣದ ಜನತಾಬರ್ಜಾರ್ ಬಳಿ ಕರವೇ(ಪ್ರವೀಣ್‌ಕುಮಾರ್‌ಶೆಟ್ಟಿಬಣ) ಬುಧವಾರ ಆಯೋಜಿಸಿದ್ದ ಕರವೇ ಆಪೆ ಆಟೋ ಚಾಲಕರ ಘಟಕ ಉದ್ಘಾಟನೆ ಹಾಗೂ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಕನ್ನಡ ಭಾಷೆಗೆ ಹಲವು ವರ್ಷಗಳ ಇತಿಹಾಸವಿದೆ. ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸುವಲ್ಲಿ ಅನೇಕರು ಶ್ರಮಿಸಿದ್ದಾರೆ. ಆಟೋ ಚಾಲಕರು ಸಮಾಜದಲ್ಲಿ ಅಪಾರ ಕೊಡುಗೆ ಕೋಡಿಗೆ ನೀಡುತ್ತಿದ್ದಾರೆ ಎಂದರು.
ಪ್ರತಿವರ್ಷ ರಾಜ್ಯೋತ್ಸದ ಪ್ರಯುಕ್ತ ಸಂಘಟನೆಯಿಂದ ಅನೇಕ ಸಮಾಜಮುಖಿ ಕಾರ್ಯ ಮಾಡಿಕೊಂಡು ಬರುತ್ತಿದ್ದು, ಈ ವರ್ಷನಟ ಪುನೀತ್ ರಾಜ್‌ಕುಮಾರ್ ಅಗಲಿಕೆಯಿಂದ ಸರಳವಾಗಿ ಆಚರಿಸಲು ನಿರ್ದೇಶನ ನೀಡಲಾಗಿದೆ. ಪುನೀತ್‌ರಾಜ್‌ಕುಮಾರ್ ಸಮಾಜಮುಖಿ ಕಾರ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿ ಎಂದರು.
ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ಕನ್ನಡ ನಾಡು-ನುಡಿ ಉಳಿವಿಗೆ ಆಟೋ ಚಾಲಕ ಪಾತ್ರ ಅತ್ಯಂತ ಮುಖ್ಯವಾದದ್ದು. ಪ್ರತಿಯೊಬ್ಬ ಅಟೋಚಾಲಕನು ನಿತ್ಯ ಕನ್ನಡಾಂಭೆಯ ಸೇವೆ ಸದಾಸಿದ್ಧನಾಗಿರುವುದು ಸಂತಸದ ಸಂಗತಿ ಎಂದರು.
ಸಂಘಟನೆ ತಾಲೂಕು ಅಧ್ಯಕ್ಷ ಹನುಮಂತರಾಜು, ಪ್ರಧಾನಕಾರ್ಯದರ್ಶಿ ರಂಗಸ್ವಾಮಿ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ರುಕ್ಮೀಣಿ, ತಾಲೂಕು ಅಧ್ಯಕ್ಷೆ ಭವ್ಯಾ, ಜೆಡಿಎಸ್ ತಾಲೂಕು ಅಧ್ಯಕ್ಷ ಎನ್.ಪಿ.ಹೇಮಂತ್‌ಕುಮಾರ್, ವೃತ್ತ ನಿರೀಕ್ಷಕ ಎ.ವಿ.ಕುಮಾರ್, ಹಸ್ಕೂರು ಗ್ರಾಪಂ ಉಪಾಧ್ಯಕ್ಷ ಸೈದಾಮಿಪಾಳ್ಯರಮೇಶ್, ದಲಿತ ಕೂಲಿಕಾರ್ಮಿಕ ಸಂಘಟನೆ ಅಧ್ಯಕ್ಷ ಬಿ.ಎಂ.ಗಂಗಬೈಲಪ್ಪ, ಕಿಸಾನ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಕುಮಾರ್, ಮುಖಂಡ ದೀಪಕ್‌ಕಿರಣ್, ಬಿಜೆಪಿ ಗ್ರಾಮಾಂತರ ಜಿಲ್ಲಾ ವಕ್ತಾರ ಸತೀಶ್, ನಮ್ಮ ಕರ್ನಾಟಕ ಜನಸೈನ್ಯ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಬಿ.ನರಸಿಂಹಯ್ಯ, ಅಧ್ಯಕ್ಷ ನವೀನ್ ಮತ್ತಿತರರು ಉಪಸ್ಥಿತರಿದ್ದರು.