ಸಕಾಲ ಸೇವೆಗೆ ಸರ್ವೋತ್ತಮ ಪ್ರಶಸ್ತಿ ; ಉತ್ತಮ ಕರ್ತವ್ಯ ನಿರ್ವಹಣೆಗೆ ಜಿಲ್ಲಾಡಳಿತದಿಂದ ಶಹಬ್ಬಾಸ್‌ಗಿರಿ

sakala
Published on

ಬೆಂಗಳೂರು ಗ್ರಾಮಾಂತರ : ಸಕಾಲ ಸೇವೆ ಚುರುಕುಗೊಳಿಸುವ ನಿಟ್ಟಿನಲ್ಲಿ ಮುಂದಾಗಿರುವ ಜಿಲ್ಲಾಡಳಿತ, ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ‘ಸರ್ವೋತ್ತಮ ಪ್ರಶಸ್ತಿ’ ನೀಡಿ ಗೌರವಿಸಲು ಚಿಂತಿಸಿದೆ.

ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳಿಗೂ ಈ ಬಗ್ಗೆ ಸುತ್ತೋಲೆ ರವಾನಿಸಲಾಗಿದೆ. ಅಲ್ಲದೆ ಈ ಬಗ್ಗೆ ಕೆಲದಿನಗಳ ಹಿಂದೆ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಘೋಷಣೆ ಮಾಡಿದ್ದಾರೆ.

ಸಕಾಲ ಸೇವೆಗಳಡಿ ಸಾರ್ವಜನಿಕರು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಇದರ ನಿರ್ವಹಣೆಯಲ್ಲಿ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕಾಲಮಿತಿಯಲ್ಲಿ ಸೇವೆ: ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಸಕಾಲ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗ್ರಾಮಾಂತರ ಜಿಲ್ಲಾಡಳಿತ ಮುಂದಾಗಿದ್ದು, ಈಗಾಗಲೇ ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸರಣಿ ಸಭೆ ಆರಂಭಿಸಿದೆ. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸಕಾಲ ಅರ್ಜಿಗಳು ಹಾಗೂ ಮೇಲ್ಮನವಿಗಳ ತ್ವರಿತ ವಿಲೇವಾರಿಗಾಗಿ ನ.30 ರಿಂದ ಡಿ.19 ವರೆಗೆ ಜಿಲ್ಲೆಯಾದ್ಯಂತ ಸಕಾಲ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು, ಯೋಜನೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಸ್ಪಂದಿಸದಿದ್ದರೆ ಶಿಸ್ತು ಕ್ರಮ: ಅಧಿಕಾರಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಸರ್ವೋತ್ತಮ ಪ್ರಶಸ್ತಿ ನೀಡಲು ಚಿಂತಿಸಿರುವ ಜಿಲ್ಲಾಡಳಿತ, ಅದೇ ರೀತಿ ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡುವುದು, ಕರ್ತವ್ಯದಿಂದ ನುಣುಚಿಕೊಳ್ಳುವುದು ಮತ್ತಿತರ ಲೋಪದೋಷ ಕಂಡುಬಂದರೆ ಅಂಥ ಅಧಿಕಾರಿಗಳ ವಿರುದ್ಧ ಅಮಾನತು ಅಥವಾ ಕಾನೂನು ಶಿಕ್ಷೆಯ ಅಸ ಪ್ರಯೋಗಿಸಲು ನಿರ್ಧರಿಸಿದೆ.

ಶೂನ್ಯ ಸ್ವೀಕೃತಿ ಸಲ್ಲ : ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸಕಾಲದಡಿಯಲ್ಲಿಯೇ ನೋಂದಾಯಿಸಿಕೊಳ್ಳಬೇಕು. ಆದರೆ ಕೆಲವು ಇಲಾಖೆಗಳಲ್ಲಿ ಸಕಾಲದಡಿ ಸ್ವೀಕರಿಸದೇ ಇರುವುದರಿಂದ ಶೂನ್ಯ ಸ್ವೀಕೃತಿ ಆಗುತ್ತಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಜಿಲ್ಲಾಡಳಿತ ಇಂಥಹದ್ದಕ್ಕೆ ಅವಕಾಶ ನೀಡಬಾರದು. ಇಂಥ ಪರಿಸ್ಥಿತಿ ಕಂಡುಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಎಚ್ಚರಿಕೆ ರವಾನಿಸಿದೆ.

ಹೆಲ್ತ್ ಡೆಸ್ಕ್‌ನಿಂದ ಸಹಾಯಹಸ್ತ: ಸಕಾಲ ಸಪ್ತಾಹದಲ್ಲಿ ಅರ್ಜಿಗಳ ವಿಲೇಗಾಗಿ ಜಿಲ್ಲಾಮಟ್ಟದಲ್ಲಿ ನಾಲ್ಕು ತಪಾಸಣಾ ತಂಡ ರಚನೆಯಾಗಲಿದೆ. ಪ್ರತಿನಿತ್ಯ ಸಕಾಲ ವಿಲೇವಾರಿ ಪ್ರಕರಣಗಳು, ಚಟುವಟಿಕೆ ಬಗ್ಗೆ ನಿಗಾವಹಿಸುವುದು, ಆಯ್ದ ಕಚೇರಿಗಳಿಗೆ ಭೇಟಿ ನೀಡುವುದು ಸಪ್ತಾಹದ ಚಟುವಟಿಕೆಗಳ ಬಗ್ಗೆ ತಪಾಸಣೆ ನಡೆಸುವ ಬಗ್ಗೆ ಜಿಲ್ಲಾಡಳಿತ ಯೋಜನೆ ರೂಪಿಸಿದ್ದು, ಪ್ರತಿ ಕಚೇರಿಯಲ್ಲಿ ಸಪ್ತಾಹದ ಬ್ಯಾನರ್ ಅಳವಡಿಕೆ, ಕಚೇರಿ ಪ್ರವೇಶ ದ್ವಾರದಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ.

ಸಕಾಲದಡಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಈ ಬಾರಿ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲು ಶಿಾರಸು ಮಾಡಲಾಗುವುದು. ಆದರೆ ಕರ್ತವ್ಯ ನಿರ್ವಹಣೆಯಲ್ಲಿ ಅಧಿಕಾರಿಗಳು ವಿಲವಾದರೆ ಶಿಸ್ತು ಕ್ರಮವನ್ನೂ ಎದುರಿಸಬೇಕಾಗುತ್ತದೆ. ಎಲ್ಲ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸುವ ಭರವಸೆ ಇದೆ. ಡಾ.ಜಗದೀಶ್ ಕೆ.ನಾಯಕ್, ಅಪರ ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net