

ತುಮಕೂರು : ಪ್ರತಿಯೊಬ್ಬರೂ ಸಕಾಲದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ವಾಡಿಸಿಕೊಳ್ಳುವ ಮೂಲಕ ಮಧುಮೇಹದಿಂದ ಆಗುವಂತಹ ದುಷ್ಪರಿಣಾಮ ತಡೆಯಲು ಮುಂದಾಗಬೇಕು ಎಂದು ಬೆಂಗಳೂರಿನ ಆಸಾಂಕ್ರಮಿಕ ರೋಗಗಳ ವಿಭಾಗ, ರಾಜ್ಯಕೋಶದ ಉಪನಿರ್ದೇಶಕ ಡಾ.ಎಚ್.ವಿ.ರಂಗಸ್ವಾಮಿ ಹೇಳಿದರು.
ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಟಕದಿಂದ ಭಾನುವಾರ ಏರ್ಪಡಿಸಿದ್ದ ಮಧುಮೇಹ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. 30 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು ಸೇರಿ ಪ್ರತಿಯೊಬ್ಬರೂ ಸಕಾಲದಲ್ಲಿ ನಿಯಮಿತವಾಗಿ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ವಾಡಿಸಿಕೊಳ್ಳಬೇಕು, ಇದರಿಂದ ಮುಂದಾಗುವಂತಹ ದುಷ್ಪರಿಣಾಮಗಳನ್ನು ತಡೆಯಬಹುದು ಎಂದರು.
ಮಧುಮೇಹ ರೋಗ ಬಂದರೆ ಕಣ್ಣು, ಮೂತ್ರ ಹಾಗೂ ಹೃದಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ ಮಧುಮೇಹ ಬರಲು ಅವಕಾಶ ನೀಡದೆ ಕಾಲ ಕಾಲಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ ಎಂದರು.
ಪ್ರತಿ ವರ್ಷ ನ.14ರಂದು ಮಧುಮೇಹ ದಿನ ಆಚರಿಸಲಾಗುತ್ತಿದೆ. ಈ ಬಾರಿ ಮಧುಮೇಹಕ್ಕೆ ಮತ್ತು ಮಧುಮೇಹದ ಆರೈಕೆಗೆ ಅವಕಾಶ ಕಲ್ಪಿಸಬೇಕು ಎಂಬುದು ವಿಶ್ವ ಆರೋಗ್ಯ ಸಂಸ್ಥೆಯ ೋಷವಾಕ್ಯವಾಗಿದೆ. ಈ ೋಷವಾಕ್ಯ 2021 ರಿಂದ 2023 ರವರೆಗೆ ಚಾಲ್ತಿಯಲ್ಲಿರುತ್ತದೆ ಎಂದರು.
ಮಧುಮೇಹಿಗಳನ್ನು ಸಕಾಲದಲ್ಲಿ ಸೂಕ್ತ ಚಿಕಿತ್ಸೆಗೆ ಒಳಪಡಿಸುವುದು, ಚಿಕಿತ್ಸೆಗೆ ಅವಕಾಶಗಳನ್ನು ಕಲ್ಪಿಸುವುದು. ಮಧಮೇಹ ಪತ್ತೆಯಾದವರಲ್ಲಿ ನಿಯಂತ್ರಣಕ್ಕೆ ಸಹಕರಿಸುವುದು ಈ ೋಷವಾಕ್ಯದ ಸಾರಾಂಶವಾಗಿದೆ, ಮಧುಮೇಹ ನಿಯಂತ್ರಣಕ್ಕಾಗಿ ಜನಜಾಗೃತಿ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ನ. 14 ರಿಂದ ನ.20ರವರೆಗೆ ಒಂದು ವಾರ ಕಾಲ ಪೂರ್ವಭಾವಿ ತಪಾಸಣೆ ಮೂಲಕ ಮಧುಮೇಹಿಗಳ ಪತ್ತೆಹಚ್ಚಲು ಸಪ್ತಾಹ ನಡೆಸಲಾಗುತ್ತಿದೆ ಎಂದರು.
ರಾಷ್ಟ್ರೀಯ ಕ್ಯಾನ್ಸರ್, ಮಧುಮೇಹ, ಪಾರ್ಶ್ವವಾಯು ನಿಯಂತ್ರಣ ಕಾರ್ಯಕ್ರಮಗಳು ಇಲಾಖೆಯಡಿ ಇವೆ. ಈ ಕಾರ್ಯಕ್ರಮಗಳ ಅಂಗನವಾಗಿ ಮಧುಮೇಹ ಪೂರ್ವಭಾವಿ ತಪಾಸಣೆಗೆ 30 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನೂ ಒಳಪಡಿಸಬೇಕಾಗಿದೆ. ಪ್ರತಿ ವರ್ಷ 30 ವರ್ಷ ಮೇಲ್ಪಟ್ಟವರು ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆಗಳನ್ನು ವಾಡಿಸಿಕೊಳ್ಳಬೇಕು ಎಂದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಡಾ.ಮಂಜುನಾಥ ಗುಪ್ತಾ, ಡಾ.ನಾಗರಾಜ ಪಾಟೀಲ್ ಮತ್ತಿತರರು ಇದ್ದರು.
ಭಾರತ ಮಧುಮೇಹದ ರಾಜಧಾನಿ ಮಧುಮೇಹ ಸಂಪೂರ್ಣ ನಿಯಂತ್ರಣದಲ್ಲಿಟ್ಟುಕೊಳ್ಳಬಹುದಾದ ಕಾಯಿಲೆ. ನಮ್ಮ ಆರೋಗ್ಯ ಶೈಲಿ, ನಮ್ಮ ಹವ್ಯಾಸದ ಮೇಲೆ ಈ ಕಾಯಿಲೆ ಬರುವುದು ಅವಲಂಬಿತವಾಗಿರುತ್ತದೆ. ಜನರು ದಿನನಿತ್ಯ ಜೀವನದಲ್ಲಿ ಆಹಾರ ಪದ್ದತಿ, ದೈಹಿಕ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಿದರೆ ಸಾಕಷ್ಟು ಪ್ರವಾಣದಲ್ಲಿ ನಿಯಂತ್ರದಲ್ಲಿಟ್ಟುಕೊಳ್ಳಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮೋಹನ್‌ದಾಸ್ ತಿಳಿಸಿದರು.
ಭಾರತ ಮಧುಮೇಹದ ರಾಜಧಾನಿ ಎಂದು ಹೆಸರಾಗಿದೆ, ದೇಶದಲ್ಲಿ ಮಧುಮೇಹ ತುಂಬಾ ಜಾಸ್ತಿಯಾಗುತ್ತಿದೆ. ಮಧುಮೇಹ ನಿಯಂತ್ರಣ ವಾಡದೇ ಇರುವುದರಿಂದ ಹೆಚ್ಚು ಜನ ಸಾವನ್ನಪುತ್ಪೃತ್ತಿದ್ದಾರೆ ಎಂದ ಅವರು, ಇಂದಿನಿಂದ 7 ದಿನ ಜಿಲ್ಲೆಯ ಎಲ್ಲ ಉಪಕೇಂದ್ರಗಳ ಮಟ್ಟದಲ್ಲಿ 30 ವರ್ಷ ತುಂಬಿದ ಮಹಿಳೆಯರು ಮತ್ತು ಪುರುಷರಿಗೆ ಸ್ಕ್ರೀನಿಂಗ್ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ, ಮಧುಮೇಹ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.