

ಗುಂಡ್ಲುಪೇಟೆ: ಸಾರ್ವಜನಿಕರನ್ನು ಕಚೇರಿಗಳಿಗೆ ಪದೇ ಪದೆ ಅಲೆಸದೆ ಸಕಾಲದಲ್ಲಿ ಕೆಲಸಗಳನ್ನು ಮಾಡಿಕೊಡಿ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಹಲವರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಮಾಡುತ್ತಿಲ್ಲ. ದೂರು ನೀಡಿದರೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಸಿಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಚುನಾವಣೆ ಸಭೆ ಹೆಸರಿನಲ್ಲಿ ಅಧಿಕಾರಿಗಳು ಕಚೇರಿಗೆ ಹಾಜರಾಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಇದು ತಪ್ಪಬೇಕು ಎಂದು ಸೂಚನೆ ನೀಡಿದರು.
ತಹಸೀಲ್ದಾರ್ ಸಿ.ಜೆ.ರವಿಶಂಕರ್, ಭೂಮಾಪನಾ ಇಲಾಖೆ ಸಹಾಯಕ ನಿರ್ದೇಶಕ ರಮೇಶ್‌ನಾಯಕ್, ಬಗರ್ ಹುಕುಂ ಸಮಿತಿ ಉಪಾಧ್ಯಕ್ಷ ನಿಟ್ರೆ ನಾಗರಾಜಪ್ಪ ಇತರರು ಇದ್ದರು.
===