

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಬ್ಬಿಗೆ ಹೆಚ್ಚುವರಿ ಎಫ್‌ಆರ್‌ಪಿ ನಿಗದಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಽಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ೪ ದಿನ ಪೂರೈಸಿತು. ಕಬ್ಬು ಅಭಿವೃದ್ಧಿ ಆಯುಕ್ತರ ಮಾತುಕತೆ ಹಾಗೂ ಸಕ್ಕರೆ ಸಚಿವರೊಂದಿಗೆ ವಿಡಿಯೋ ಕಾನರೆನ್ಸ್ ಮೂಲಕ ನಡೆದ ಮಾತುಕತೆ ವಿಫಲವಾಗಿದ್ದು, ನ. ೧೦ರವರೆಗೆ ಕಾದು ನೋಡಿ ಅಲ್ಲಿಯವರೆಗೂ ಧರಣಿ ಮುಂದುವರಿಸಲು ರೈತರು ನಿರ್ಧರಿಸಿದರು.
ರೈತರ ನಿರಂತರ ಧರಣಿಯ ಪರಿಣಾಮ ಸಕ್ಕರೆ ನಿರ್ದೇಶನಾಲಯ ಆಯುಕ್ತ ಶಿವಾನಂದ ಕಲಕೇರಿ ಅವರು ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಂತರ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರೈತ ಪ್ರತಿನಿಽಗಳು ಹಾಗೂ ಅಽಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ಜರುಗಿಸಿ ನಡೆಸಿದ ಮಾತುಕತೆಯೂ ವಿಫಲವಾಯಿತು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮÁರ, ಹೆಚ್ಚುವರಿ ಎ-ïಆರ್‌ಪಿ ನಿಗದಿಗಾಗಿ ಸರ್ಕಾರ ನ .೧೦ರಂದು ಸಭೆ ಕರೆದಿದ್ದು, ರೈತರಿಗೆ ಅನುಕೂಲಕರ ನಿರ್ಧಾರ ಕÊಗೊಳ್ಳುವುದಾಗಿ ಸಕ್ಕರೆ ಸಚಿವ ಮುನೇನಕೊಪ್ಪ ತಿಳಿಸಿದ್ದಾರೆ. ಆಯುಕ್ತರು ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲಾಽಕಾರಿಗಳೊಂದಿಗೆ ಸಭೆ ಮÁಡಿ ನ. ೪ರ ಸಂಜೆಯೊಳಗೆ ವರದಿ ಸಲ್ಲಿಸಲಿದ್ದಾರೆ. ರೈತರು ಹಳಿಯÁಳ ಕಾರ್ಖಾನೆ ಆರಂಭಕ್ಕೆ ಶಾಂತಿಯುತವಾಗಿ ಸಹಕರಿಸಬೇಕು ಎಂದು ಸಚಿವರು ಮನವಿ ಮÁಡಿದ್ದಾರೆ. ಕಾರ್ಖಾನೆಗೆ ಕಬ್ಬು ಸರಬರಾಜು ಮÁಡಬೇಕೆ ಬೇಡವೇ ಎಂಬುದನ್ನು ನ. ೪ರಂದು ಹಳಿಯಾಳದಲ್ಲಿ ಕಬ್ಬು ಬೆಳೆಗಾರ ರೈತರ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಜಿಲ್ಲಾಽಕಾರಿ ಕಚೇರಿ ಆವರಣದಲ್ಲಿ ಶಾಂತಿಯುತ ಧರಣಿ ಮುಂದುವರಿಸಲಾಗುವುದು ಎಂದರು.