ಸಕ್ಕೆರೆ ಕಾರ್ಖಾನೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾ ಆಚರಣೆ

International Yoga Day celebrated at sugar factory
ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ನಡೆಸಿದರು.
Published on

ವಿಜಯಪುರ : ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಶ್ರಯದಲ್ಲಿನ ಶ್ರೀ ಬಿ.ಟಿ. ಪಾಟೀಲ ಮೆಮೋರಿಯಲ್​, ನಂದಿ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ ಶನಿವಾರ 11ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸಂವಿತ್​ ರಿಸರ್ಚ ಫೌಂಡೇಶನ್​ ಉತ್ತರ ಕರ್ನಾಟಕ ವಿಭಾಗ ಸಂಚಾಲಕ ಪರಶುರಾಮ ಕಲ್ಯಾಣಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಯೋಗದ ಮಹತ್ವದ ಕುರಿತು ಮನವರಿಕೆ ಮಾಡಿಕೊಡುವುದರ ಮೂಲಕ ಯೋಗಾಭ್ಯಾಸ ಮಾಡಿಸಿದರು.

ಯೋಗ ದಿನಾಚರಣೆ ಅಂಗವಾಗಿ ವಿಜಯಪುರದ ಇಂಡಿಯನ್​ ರೆಡ್​ ಕ್ರಾಸ್​ ಸೊಸೈಟಿ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಸುಮಾರು 18 ಜನರು ರಕ್ತದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net