ಸಖಿ ಕೇಂದ್ರದ ವಾಹನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಜಾನಕಿ

eaa310d6-c3f3-46a5-b4f7-c5c5020e0ddc
Published on

ಬಾಗಲಕೋಟೆ: ಮಹಿಳೆಯರಿಗೆ ಒಂದೇ ಸೂರಿನಡಿ ಹಲವು ಸೇವೆಯನ್ನು ಸಖಿ ಒನ್ ಸ್ಟಾಪ್ ಸೆಂಟರ್ ಮೂಲಕ ನೀಡಲಾಗುತ್ತಿದ್ದು ನೊಂದ ಬಾಲಕಿಯರು ಮತ್ತು ಮಹಿಳೆಯರ ರಕ್ಷಣೆಗಾಗಿ ನೀಡಲಾಗಿರುವ ಸಖಿ ಕೇಂದ್ರದ ವಾಹನದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಮ್ ಹೇಳಿದರು.

ಬುಧವಾರದಂದು ಜಿಲ್ಲಾಡಳಿತ ಭವನ ಮುಂಬಾಗದಲ್ಲಿ ಸಖಿ ಕೇಂದ್ರದ ವಾಹನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನೊಂದ ಮಹಿಳೆಯರು , ಬಾಲಕಿಯರಿಗೆ ಸೂಕ್ತ ರಕ್ಷಣೆ, ಆಶ್ರಯ, ಕಾನೂನು ಸಲಹೆ, ಆಪ್ತ ಸಮಾಲೋಚನೆ, ಪೊಲೀಸ್ ನೆರವು ಇವೆಲ್ಲವೂ ಒಂದೇ ಸೂರಿನಡಿ ಕಲ್ಪಿಸುವುದು ಸಖಿ ಕೇಂದ್ರದ ಮುಖ್ಯ ಧ್ಯೇಯವಾಗಿದೆ. ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿ ವರ್ಗ ಮತ್ತು ಸಖಿ ಕೇಂದ್ರದ ಸಿಬ್ಬಂದಿ ಉತ್ತಮ ಸೇವೆ ಒದಗಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ ಕವಿತಾಳ ಹಿರಿಯ ಸಹಾಯಕ ನಿರ್ದೇಶಕಿ ಸುಮಂಗಲಾ ಹಿರೇಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ ಎಂ, ಕಚೇರಿ ಅಧೀಕ್ಷಕ ರಾಜಶೇಖರ್ ಜಂಬಗಿ, ಸಖಿ ಕೇಂದ್ರದ ಆಡಳಿತಾಧಿಕಾರಿ ಶಂಕ್ರಮ್ಮ ಜಮ್ಮನಕಟ್ಟಿ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಸಖಿ ಕೇಂದ್ರದ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net