ಸಚಿವ ಚವ್ಹಾಣ್ ವಿರುದ್ಧ ಇಲ್ಲಸಲ್ಲದ ಆರೋಪ

Capture2
Published on

ಕಮಲನಗರ: ಕೆಲವರು ತಮ್ಮ ಪ್ರಚಾರ ಮತ್ತು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಹಾಗೂ ಕನರ್ಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯ ವಸಂತ ವಕೀಲ್ ಕಿಡಿಕಾರಿದ್ದಾರೆ.

ಪಶು ಸಂಗೋಪನೆ ಇಲಾಖೆ ಹೆಸರು ಕೆಡಿಸುವಂಥ ಕೃತ್ಯದಲ್ಲಿ ಕೆಲವರು ತೊಡಗಿರುವ ಅನುಮಾನ ವ್ಯಕ್ತವಾಗುತ್ತಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಮ ವಹಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಸಾರ್ವಜನಿಕರನ್ನು ವಂಚಿಸುವವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶವನ್ನು ಸಚಿವ ಚವ್ಹಾಣ್ ರವಾನಿಸಿದ್ದಾರೆ. ವಿಷಯವನ್ನು ಸರಿಯಾಗಿ ತಿಳಿದುಕೊಳ್ಳದೆ ರಾಜಕೀಯ ಪ್ರಚಾರಕ್ಕಾಗಿ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಅವರು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋವು ಜತೆಗೆ ಎಲ್ಲ ಜಾನುವಾರುಗಳ ಬಗ್ಗೆ ಅಪಾರ ಪ್ರೀತಿ ಮತ್ತು ಕಾಳಜಿ ಹೊಂದಿರುವ ಸಚಿವರು, ಇಷ್ಟಪಟ್ಟು ಪಶು ಸಂಗೋಪನೆ ಖಾತೆ ಪಡೆದಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರ ಇಲಾಖೆಯಲ್ಲಿ ಹಿಂದೆಂದಿಗಿಂತಲೂ ಸಾಕಷ್ಟು ಸುಧಾರಣೆಗಳನ್ನು ತಂದಿದ್ದಾರೆ. ಎಲ್ಲರೂ ನಿಷ್ಕಾಳಜಿಯಿಂದ ನೋಡುವ ಪಶು ಸಂಗೋಪನೆ ಇಲಾಖೆ ಚವ್ಹಾಣ್ ಪರಿಶ್ರಮದಿಂದಾಗಿ ಜನಸ್ನೇಹಿಯಾಗಿ ಗುರುತಿಸಿಕೊಂಡಿದೆ. ತಮ್ಮ ಮತಕ್ಷೇತ್ರದಲ್ಲೂ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಅವರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ತಿಳಿಸಿದ್ದಾರೆ.

ಸಚಿವರ ಬಗ್ಗೆ ಜನತೆಗೆ ಸರಿಯಾಗಿ ಗೊತ್ತಿದ್ದರೂ ಅಭಿವೃದ್ಧಿ ಕೆಲಸಗಳನ್ನು ಸಹಿಸದೆ ಸುಳ್ಳು ಆರೋಪ ಮಾಡುತ್ತಿರುವುದು ಸರಿಯಲ್ಲ. ಇಂತಹ ಹೇಳಿಕೆಗಳಿಂದ ಜನತೆ ವಿಚಲಿತರಾಗುವುದಿಲ್ಲ ಮತ್ತು ದಾರಿ ತಪ್ಪುವುದಿಲ್ಲ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net