ಸಚಿವ ಜಮೀರ್ ಜಿಲ್ಲಾ ಪ್ರವಾಸ 17ಕ್ಕೆ

jameer
Published on

ಚಿತ್ರದುರ್ಗ: ರಾಜ್ಯ ವಸತಿ, ವಕ್ಫೃ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅ. 17ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಅಂದು ಬೆಳಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಬರಲಿದ್ದಾರೆ. ನಂತರ ಮದಕರಿನಾಯಕ, ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿರಾಯಣ್ಣ, ಕನಕದಾಸರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

11.30ಕ್ಕೆ ಬಡಾಮಕಾನ್, ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12ಕ್ಕೆ ರಾಜ್ಯ ವಕ್ಫೃ್ ಮಂಡಳಿಗೆ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಅನ್ವರ್ ಬಾಷಾ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಅಂಜುಮನ್-ಐ-ದಾರುಲ್ ಉದ್ ಶಾದಿ ಮಹಲ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 6ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net