ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ?

7RAYANNA-1
ಬೆಂಗಳೂರ ನಗರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಮುಖಂಡ ಕಾಂಗ್ರೆಸ್ ಮುಖಂಡ ಬಿ.ವಿ.ಜಯರಾಮು ಹೂವುಗುಚ್ಛ ನೀಡಿ ಗೌರವಿಸಿದರು.
Published on

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬುದು ನಾಡಿನ ಕೋಟ್ಯಂತರ ಜನರ ಆಭಿಲಾಷೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ವಿ.ಜಯರಾಮು ಅಭಿಪ್ರಾಯಪಟ್ಟಿದ್ದಾರೆ. ಸಚಿವ ಡಾ.ಜಿ.ಪರಮೇಶ್ವರ್ ಅವರ ಜನ್ಮದಿನದ ಅಂಗವಾಗಿ ಮಾಗಡಿ ತಾಲೂಕಿನ ಮುಳ್ಳುಕಟ್ಟಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಬಡವರಿಗೆ ಉಚಿತ ಬಟ್ಟೆ, ಮಹಿಳೆಯರಿಗೆ ಸೀರೆಗಳನ್ನು ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗೆಸ್ ಮುಖಂಡ ಸುನೀಲ್ ಪ್ರಕಾಶ, ಜಗದೀಶ್, ಜಯಚಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net