ಸಚಿವ ಡಿ.ಸುಧಾಕರ್ ರಾಜೀನಾಮೆಗೆ ಬಿಜೆಪಿ ಒತ್ತಾಯ

ctd 12 bargavi dravida--06
Published on

ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ
ಜಾತಿನಿಂದನೆ ಆರೋಪ ಹೊತ್ತಿರುವ ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆ ಗ್ರಹಿಸಿದೆ. ದಲಿತರ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಎಪ್‌ಐಆರ್ ದಾಖಲಾಗಿದ್ದರೂ ಸಚಿವರ ರಾಜೀನಾಮೆ ಪಡೆಯದೆ ರಾಜ್ಯ ಸರ್ಕಾರದ ಇಬ್ಬಂದಿ ನೀತಿ ಪ್ರದರ್ಶಿಸುತ್ತಿದೆ ಎಂದು ರಾಜ್ಯಬಿಜೆಪಿ ಎಸ್‌ಸಿ ಮೋರ್ಚಾ ಕಾರ‌್ಯಕಾರಿಣಿ ಸದಸ್ಯೆ ಎನ್.ಬಿ.ಭಾರ್ಗವಿ ದ್ರಾವಿಡ ಅವರು ಹೇಳಿಕೆಯಲ್ಲಿ ಟೀಕಿಸಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ದಲಿತರ ಮಾನ,ಪ್ರಾಣಗಳಿಗೆ ಬೆಲೆ ಇಲ್ಲದಂತಾಗಿದೆ. ಬೆಂಗಳೂರು ಯಲಹಂಕದ ಜಮೀನೊಂದರ ವಿವಾದ ನ್ಯಾಯಾಲಯದಲ್ಲಿದೆ. ಆದರೂ ಸಚಿವ ಸುಧಾಕರ್,ರೌಡಿಗಳನ್ನು ಕಳಿಸಿ ದಲಿತದ ಕುಟುಂಬದ ಸದಸ್ಯರ ಮೇಲೆ ಹಲ್ಲೆ ಹಾಗೂ ಅಲ್ಲಿದ್ದ ಮನೆಯನ್ನು ನೆಲಸಮ ಮಾಡಿಸಿದ್ದಾರೆ.
ವಿಡಿಯೊವೊಂದರಲ್ಲಿ ನಾನು ಕೂಡ ರೌಡಿಯೇ ಎಂದಿರುವ ಇಂಥ ಸಚಿವರಿಂದ ಜನರು ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವೇ?ಗೃಹ ಮಂತ್ರಿ ಸಹಿತ ಸಚಿವರು,ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಯವರಿದ್ದರೂ ನೊಂದವರಿಗೆ ರಕ್ಷಣೆ ಇಲ್ಲದಂತಾಗಿದೆ. ಪ್ರಕ ರಣಕ್ಕೆ ಸಂಬಂಧಿಸಿದಂತೆ ಸುಧಾಕರ್ ಅವರ ರಾಜೀನಾಮೆ ಪಡೆದು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಭಾರ್ಗವಿ ಅವ ರು ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net