ಸಚಿವ ಮಹದೇವಪ್ಪ ನೇತೃತ್ವದಲ್ಲಿ ಸಭೆ

20 HANUR 2
Published on

ಹನೂರು: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಚಾ.ನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಶಾಸಕ ಎ.ಆರ್. ಕೃಷ್ಣಮೂರ್ತಿ, ಹಣಕಾಸು ಇಲಾಖೆಯ ಅತೀಕ್, ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಸಿದರು.

ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಮಾಹಿತಿ ಹಂಚಿಕೊಂಡಿದ್ದಾರೆ. ಹನೂರು ತಾಲೂಕು ಕಚೇರಿ ನಿರ್ಮಾಣ, ಕೊಳ್ಳೇಗಾಲದಲ್ಲಿ ಉಪ ವಿಭಾಗೀಯ ಆಸ್ಪತ್ರೆ ನಿರ್ಮಾಣ, ಹನೂರಿನಲ್ಲಿ 100 ಹಾಸಿಗೆಯ ಆಸ್ಪತ್ರೆ, ಹೋಬಳಿ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 10 ಹೊಸ ಆಂಬುಲೆನ್ಸ್ ಸೇವೆಗಳಿಗೆ ಪ್ರಸ್ತಾವನೆ, ಹೆಚ್ಚು ಆಶಾ ಕಾರ್ಯಕರ್ತರಿಗೆ ಮನವಿ, ಚಾ.ನಗರ ನಿಲ್ದಾಣ ಸ್ಥಳಾಂತರ, ಜಿಲ್ಲಾ ಗ್ರಂಥಾಲಯ ನಿರ್ಮಾಣ, ಬ್ರೈಲ್ ಲೈಬ್ರೆರಿ ನಿರ್ಮಾಣ ಸೇರಿದಂತೆ ಇನ್ನೂ ಹಲವಾರು ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು ಎಂದು ಸಚಿವ ಮಹದೇವಪ್ಪ ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net