ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಜೆಪಿ ಆಕ್ರೋಶ

bkt-28-8
ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಿದರು. ಬಿಜೆಪಿ ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಮಾಧ್ಯಮ ವಕ್ತಾರ ಸತ್ಯನಾರಯಣ ಹೇಮಾದ್ರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾವಿ, ಮುಖಂಡರಾದ ಶಿವಾನಂದ ಟವಳಿ, ಮುಖಂಡರಾದ ಭುವನೇಶ್ವರ ಪೂಜಾರ, ಬಸವರಾಜ ಹುನಗುಂದ, ಚಂದ್ರು ಸರೂರ ಇತರರು ಇದ್ದರು.
Published on

ಬಾಗಲಕೋಟೆ: ರಾಜ್ಯ ಸರ್ಕಾರದ ಸಚಿವ ಶಿವರಾಜ ತಂಗಡಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವ ಹೇಳನಕಾರಿಯಾಗಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಸಚಿವ ಶಿವರಾಜ ತಂಗಡಗಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವದ ಮೆಚ್ಚಿದ ನಾಯಕ. ಅವರ ಬಗ್ಗೆ ಯುವ ಸಮೂಹಕ್ಕೆ ಅಪಾರ ಗೌರವ, ಪ್ರೀತಿ ಇದೆ. ಆದರೇ ಕಾಂಗ್ರೆಸ್ ಅವರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಅವಹೇಳನಕಾರಿಯಾಗಿ ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ಚುನಾವಣೆ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಮಾಧ್ಯಮ ವಕ್ತಾರ ಸತ್ಯನಾರಯಣ ಹೇಮಾದ್ರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾವಿ, ಮುಖಂಡರಾದ ಶಿವಾನಂದ ಟವಳಿ, ಮುಖಂಡರಾದ ಭುವನೇಶ್ವರ ಪೂಜಾರ, ಬಸವರಾಜ ಹುನಗುಂದ, ಚಂದ್ರು ಸರೂರ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net