ಸಚಿವ ಸಂಪುಟ ಸಭೆಯಲ್ಲಿ ರೈತರ ಬೇಡಿಕೆ ಈಡೇರಲಿ

IMG_20241226_131045
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.5993518, 0.15691666);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 35;
Published on

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿಯಲ್ಲಿ ನಡೆಯುವ ಮುಖ್ಯಮಂತ್ರಿಗಳ ಸಚಿವ ಸಂಪುಟ ಸಭೆಯಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕ್ಯಾಬಿನೆಟ್ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಭೆಯಲ್ಲಿ ರೈತರ ಬೇಡಿಕೆಗಳಾದ ಫಸಲ್ ಭೀಮಾ ಯೋಜನೆಯನ್ನು ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೂ ವರ್ಷಪೂರ್ತಿ ಅನ್ವಯವಾಗುವಂತೆ ಜಾರಿಗೆ ತರಬೇಕು. ಜತೆಗೆ ವೈಯಕ್ತಿಕ ವಿಮಾ ಪಾಲಿಸಿಯನ್ನು ಎಲ್ಲಾ ಬೆಳೆಗಳಿಗೂ ಜಾರಿಗೊಳಿಸಬೇಕು ಎಂದು ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.

ಕರನಿರಾಕರಣೆಯ ಸಂದರ್ಭದಲ್ಲಿ ಉಳಿಸಿಕೊಂಡಿರುವ ಗೃಹ ಬಳಕೆ ವಿದ್ಯುತ್ ಬಾಕಿಯನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ರೈತರ ಕೃಷಿ ಪಂಪ್‌ಸೆಟ್‌ಗಳ ಅನಧೀಕೃತ ವಿದ್ಯುತ್ ಸಂಪರ್ಕವನ್ನು ಅಧಿಕೃತಗೊಳಿಸಲು ಹಾಗೂ ಹೊಸ ಸಂಪರ್ಕವನ್ನು ಪಡೆಯಲು ರೈತರೆ ಪೂರ್ಣ ವೆಚ್ಚವನ್ನು ಭರಿಸಬೇಕೆಂದು ಹೊರಡಿಸಿರುವ ಆದೇಶವನ್ನು ಕೂಡಲೇ ಕೈಬಿಟ್ಟು ಸಾಂಕೇತಿಕ ಮೊತ್ತವನ್ನು ಪಡೆದು ಸಂಪರ್ಕವನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಕೃಷಿ ಉತ್ಪನ್ನಗಳಿಗೆ ಸ್ವಾಮಿನಾಥನ್ ವರದಿಯನ್ವಯ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿ ಎಲ್ಲಾ ಬೆಳೆಗಳನ್ನು ಸಕಾಲದಲ್ಲಿ ಖರೀದಿಸಬೇಕು. ಕಳೆದ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ಕೊಡಬೇಕಾಗಿರುವ ಉಪ ಉತ್ಪನ್ನಗಳ ಬಾಕಿ ಹಣ ಪಾವತಿ ಹಾಗೂ ಟನ್ ಕಬ್ಬಿಗೆ 5000 ರೂ. ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎ.ಎಲ್.ಕೆಂಪುಗೌಡ, ವಿಭಾಗೀಯ ಕಾರ್ಯದರ್ಶಿ ಸಿ.ಸಿದ್ದರಾಜು, ಖಾಯಂ ಸದಸ್ಯ ಹೆಬ್ಬಸೂರು ಬಸವಣ್ಣ, ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಭಾಸ್ಕರ್, ಕಾರ್ಯಾಧ್ಯಕ್ಷ ಶೈಲೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net