ಸಚಿವ ಸ್ಥಾನ ನೀಡದ್ದಕ್ಕೆ ಅಸಮಧಾನವಿದೆ: ಕೆ.ಎಸ್. ಈಶ್ವರಪ್ಪ

Published on

ಮೈಸೂರು: ನನ್ನ ವಿರುದ್ಧ ಆರೋಪ ಕೇಳಿಬಂದ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಆದರೆ ಈಗ ಪ್ರಕರಣದಿಂದ ಕ್ಲೀನ್‌ಚಿಟ್ ಸಿಕ್ಕಿದ್ದರೂ ಸಚಿವ ಸ್ಥಾನ ನೀಡಿಲ್ಲ ಎನ್ನುವ ಅಸಮಾಧಾನ ಸಹಜವಾಗಿದೆ. ನನಗೆ ಕ್ಲೀನ್‌ಚಿಟ್ ಸಿಕ್ಕ ನಂತರ ಸಚಿವ ಸ್ಥಾನ ನೀಡಬೇಕಿತ್ತು. ಕಾಲು ನೋವಿನಿಂದ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಸಚಿವ ಸ್ಥಾನ ನೀಡದಿರುವುದರಿಂದ ಕಲಾಪದಿಂದ ಹೊರಗಿದ್ದೇನೆ ಎನ್ನುವುದು ಸರಿಯಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net