ಸಚಿವ ಸ್ಥಾನದ ಆಕಾಂಕ್ಷೆ ಸಹಜ

30 Dwd 3 Arvind Bellad
Published on

ಧಾರವಾಡ: ಶಾಸಕರಾದವರಿಗೆ ಸಚಿವರಾಗುವ ಆಸೆ ಇದ್ದೇ ಇರುತ್ತದೆ. ಯಾವುದೇ ಪಕ್ಷ ಅಧಿಕಾರದಲ್ಲಿದ್ದಾಗ ಇದು ಸಹಜ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಹಲವು ಶಾಸಕರು ಸಚಿವ ಸ್ಥಾನದ ಇಚ್ಛೆ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದರು. ಇದನ್ನು ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಗೆಹರಿಸುತ್ತಾರೆ ಎನ್ನುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ದೊಡ್ಡ ಜಿಲ್ಲೆ, ಬಿಜೆಪಿ ಶಾಸಕರ ಪ್ರಾಬಲ್ಯ ಇರುವುದು ನಿಜ. ರಾಜ್ಯದಲ್ಲಿ ಹೆಚ್ಚು ಬಿಜೆಪಿ ಶಾಸಕರಿರುವ ಜಿಲ್ಲೆ. ಹೀಗಾಗಿ ಅಲ್ಲಿನ ಶಾಸಕರು ಸಚಿವ ಸ್ಥಾನ ಕೇಳುವುದು ಸಹಜ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರವಾಹ ಬಂದಿತು. ಈಗ ಕರೊನಾ ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ತಮ್ಮ ಕೆಲಸದಲ್ಲಿ ಮಗ್ನರಾಗಿದ್ದಾರೆ. ಕೆಲ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನದಲ್ಲಿ ವ್ಯತ್ಯಾಸವಾಗಿದೆ ಎಂದು ಹೇಳಿದ್ದಾರೆ. ಸರ್ಕಾರದ ಮಟ್ಟದಲ್ಲಿ ಇದನ್ನು ರ್ಚಚಿಸಿ ಸರಿ ಮಾಡಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net