ಸಚಿವದ್ವಯರಿಗೆ ಆಹ್ವಾನ ಪತ್ರಿಕೆ ನೀಡಿದ ದಸರಾ ಸಮಿತಿ

17_HSN_01
ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರಿಗೆ ರಂಭಾಪುರಿ ಶ್ರೀಗಳ ಶರನ್ನವರಾತ್ರಿ ದಸರಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ದಸರಾ ಸಮಿತಿ ಪದಾಧಿಕಾರಿಗಳು ನೀಡಿದರು.
Published on

ಅನುದಾನ ನೀಡುವುದಾಗಿ ಭರವಸೆ

ಹಾಸನ: ಬೇಲೂರಿನಲ್ಲಿ ಸೆ.26 ರಿಂದ ಅ.5ರವರೆಗೆ ನಡೆಯಲಿರುವ ಬಾಳೆಹೊನ್ನೂರು ಜಗದ್ಗುರು ರಂಭಾಪುರಿ ಶ್ರೀಗಳ ಶರನ್ನವರಾತ್ರಿ ದಸರಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರಿಗೆ ಶುಕ್ರವಾರ ಬೆಂಗಳೂರಿನಲ್ಲಿ ದಸರಾ ಸಮಿತಿ ಪದಾಧಿಕಾರಿಗಳು ನೀಡಿದರು.


ಪ್ರವಾಸೋದ್ಯಮ ಖಾತೆ ಸಚಿವ ಆನಂದ ಸಿಂಗ್ ಅವರು ತಮ್ಮ ಇಲಾಖೆ ವತಿಯಿಂದ ರಂಭಾಪುರಿ ಶ್ರಿಗಳ ದಸರಾ ಮಹೋತ್ಸವಕ್ಕೆ 25 ಲಕ್ಷ ರೂ. ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು 5 ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.


ದಸರಾ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎಸ್.ಲಿಂಗೇಶ್, ವೀರಶೈವ ಲಿಂಗಾಯತ ಮಹಾಸಭಾದ ಹಾಸನ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಹಳೇಬೀಡು ಬಸವರಾಜ್, ಸಂಜಯ್ ಕೌರಿ, ಚೇತನ್, ವಿಷ್ಣು, ನೀಲಕಂಠ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net