ಸಚಿವರ ವಿರುದ್ಧ ದೂರು ದಾಖಲು

girish
Published on

ಹುಬ್ಬಳ್ಳಿ: ಟಿಪ್ಪು ರೀತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಮಂಡ್ಯದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿಕೆ ನೀಡಿದ್ದು, ಅವರನ್ನು ತಕ್ಷಣ ಬಂಧಿಸಬೇಕೆಂದು ಕರ್ನಾಟಕ ರಾಜ್ಯ ಸಿದ್ದರಾಮಯ್ಯನವರ ಅಭಿಮಾನಿಗಳ ಬಳಗದ ಅಧ್ಯಕ್ಷ ಗಿರೀಶ ಗದಿಗೆಪ್ಪಗೌಡರ್ ಹುಬ್ಬಳ್ಳಿ ಗೋಕುಲ ರೋಡ್ ಪೋಲಿಸ್ ಠಾಣೆಯಲ್ಲಿ ಗುರುವಾರ ದೂರು ನೀಡಿದ್ದಾರೆ.

ನಮ್ಮ ನಾಯಕರನ್ನು ಮುಗಿಸಬೇಕು ಎಂದು ಹೇಳಿಕೆ ನೀಡಿರುವುದು ಖಂಡನೀಯ. ಸಚಿವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ದೂರಿನ ಆಧಾರದಲ್ಲಿ ಎಫ್​ಐಆರ್ ದಾಖಲಿಸಿಕೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ. ಎಫ್​ಐಆರ್ ದಾಖಲಿಸಿಕೊಳ್ಳದಿದ್ದರೆ ಪೋಲಿಸ್ ಠಾಣೆ ಎದುರು ಧರಣಿ ನಡೆಸುತ್ತೇವೆ ಎಂದು ಗದಿಗೆಪ್ಪಗೌಡರ್ ಸುದ್ದಿಗಾರರಿಗೆ ತಿಳಿಸಿದರು.

ದೂರುದಾರರು ಸೂಕ್ತ ದಾಖಲೆಗಳನ್ನು ಒದಗಿಸಿದರೆ ಎಫ್​ಐಆರ್ ದಾಖಲಿಸಿಕೊಳ್ಳುತ್ತೇವೆ. ಇಲ್ಲವಾದಲ್ಲಿ ಈ ದೂರನ್ನು ಮಂಡ್ಯಕ್ಕೆ ವರ್ಗಾಯಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net