ಸಚಿವರು ಅಭಿವೃದ್ಧಿ ಬಗ್ಗೆ ಯೋಚಿಸುತ್ತಿಲ್ಲ

mahesh tenginkai
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಕಾಂಗ್ರೆಸ್​ನಲ್ಲಿ ಒಳಜಗಳ ಹೆಚ್ಚಾಗಿದ್ದು, ರಾಜ್ಯ ಬಹಳಷ್ಟು ಬಳಲುತ್ತಿದೆ. ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾಗಿತ್ತು. ಆದರೆ, ಸಚಿವರು ಅಭಿವೃದ್ಧಿ ಬಗ್ಗೆ ಯೋಚಿಸುತ್ತಿಲ್ಲ. ಯಾರನ್ನು ಸಿಎಂ ಮಾಡಬೇಕು, ಯಾರನ್ನು ತೆಗೆಯಬೇಕು ಎಂಬ ಯೋಚನೆಯಲ್ಲಿ ಮುಳುಗಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಸದ್ಯದ ಪರಿಸ್ಥಿತಿ ನೋಡಿದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಸಿಎಂ ಮಾಡಬಾರದು ಎಂಬ ಶಪಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದಂತಿದೆ ಎಂದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಸಹ ನಡೆಯುತ್ತಿಲ್ಲ. ಪಕ್ಷದಲ್ಲಿ ಆಂತರಿಕ ಕಚ್ಚಾಟ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಮನೆಯೊಂದು ಮೂರು ಬಾಗಿಲು ಎಂದು ಹೇಳಲಾಗುತ್ತದೆ. ಆದರೆ, ಕಾಂಗ್ರೆಸ್ ಮಟ್ಟಿಗೆ ನಾಲ್ಕೈದು ಬಾಗಿಲಗಳು ಆಗಿವೆ ಎಂದು ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net