ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ

h17-chougla
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಗಾಮನಗಟ್ಟಿ ರಸ್ತೆಯ ಜ್ಞಾನಸಿರಿ ಕ್ಯಾಂಪಸ್​ನಲ್ಲಿನ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಹಿರಿಯ ವಕೀಲ ಅರುಣ ಜೋಶಿ ಮಾತನಾಡಿ, ವಿದ್ಯಾರ್ಥಿಗಳು ಸಮಯದ ಸದ್ಭಳಕೆ ಮಾಡಿಕೊಳ್ಳಬೇಕು. ಸತತ ಪ್ರಯತ್ನ, ಶಿಸ್ತು ಮತ್ತು ಆತ್ಮ ವಿಶ್ವಾಸದಿಂದ ಯಶಸ್ವಿನ ಮೆಟ್ಟಿಲು ಏರಲು ಸಾಧ್ಯ. ಪಾಲಕರು ಮಕ್ಕಳಿಗೆ ಎಲ್ಲ ರೀತಿಯ ಸೌಕರ್ಯ ಕೊಟ್ಟು ಅನುಕೂಲ ಮಾಡಿಕೊಡುತ್ತಾರೆ. ಮಕ್ಕಳು ಸಮಯ ಹಾಗೂ ಸೌಕರ್ಯಗಳನ್ನು ಸದ್ಬಳಕೆ ಮಾಡಿಕೊಂಡರೆ ಯಶಸ್ಸು ಸಾಧ್ಯ ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಮೌಲ್ಯಯುತ, ಗುಣಮಟ್ಟದ ಮತ್ತು ನೈತಿಕ ಶಿಕ್ಷಣದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಮಹತ್ವದ ಕಾರ್ಯ ಮಾಡುತ್ತಿದೆ. ಇವರ ಬದ್ಧತೆಯಿಂದ ಕಳೆದ 13 ವರ್ಷಗಳಿಂದ ಪಿಯು ಬೋರ್ಡ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ ಎಂದರು.

ಐಐಟಿ ಮತ್ತು ಮೆಡಿಕಲ್ ಕಾಲೇಜ್​ನಲ್ಲಿ ಪ್ರವೇಶ ಪಡೆದ ಇದೇ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಅನೀಲಕುಮಾರ ಚೌಗಲಾ, ಅಧ್ಯಕ್ಷೆ ಶ್ರೀದೇವಿ ಚೌಗಲಾ, ನಿರ್ದೆಶಕರು, ಪ್ರಾಚಾರ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net