ಸದನದಲ್ಲಿ ಅಹೋರಾತ್ರಿ ಧರಣಿ, ಸುನೀಲಗೌಡರ ಭಂಗಿ ಹೇಗಿತ್ತು ಗೊತ್ತಾ?

IMG-20220218-WA0020
Published on

ವಿಜಯಪುರ: ಸಚಿವ ಕೆ.ಎಸ್‌. ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದು ಕಾಂಗ್ರೆಸ್ ಸದನದಲ್ಲಿ ಅಹೋರಾತ್ರಿ ನಡೆಸುತ್ತಿದ್ದು, ಜಿಲ್ಲೆಯ ಕೈ ನಾಯಕರು ಸಹ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕೆಪಿಸಿಸಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

ಕಾಂಗ್ರೆಸ್ ನ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಗುರುವಾರ ರಾತ್ರಿ ವಿಧಾನಸೌಧದಲ್ಲೇ ಕಳೆದಿದ್ದಾರೆ.

ಈ ಮಧ್ಯೆ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ರಾತ್ರಿ ವಾಸ್ತವ್ಯದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು ಕುತೂಹಲ ಮೂಡಿಸಿವೆ. ಬಿಜೆಪಿಯ ದುರ್ವರ್ತನೆ ಖಂಡಿಸಿ ನಡೆಸುತ್ತಿರುವ ಧರಣಿಯಲ್ಲಿ ಪಕ್ಷನಿಷ್ಠನಾಗಿ ಪಾಲ್ಗೊಂಡಿರುವುದಾಗಿ ಸುನೀಲಗೌಡ ಪಾಟೀಲ ಪ್ರತಿಕ್ರಿಯಿಸಿದ್ದಾರೆ.

ಅಲ್ಲದೇ, ವಿಧಾನ ಪರಿಷತ್ ಚುನಾವಣೆ ಸಂದರ್ಭ ಮತದಾರರಿಗೆ ನೀಡಿದ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಸದನದಲ್ಲಿ ಧ್ವನಿ ಎತ್ತುವೆ. ಸದಸ್ಯರ ಭತ್ಯೆ ಹೆಚ್ಚಳ, ಉಚಿತ ಬಸ್ ಪಾಸ್ ವಿತರಣೆ ಮತ್ತಿತರ ಬೇಡಿಕೆ ಈಡೇರಿಕೆಗೆ ಧ್ವನಿ ಎತ್ತುವುದಾಗಿ "ವಿಜಯವಾಣಿ"ಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net