

ಧಾರವಾಡ: ವಿದ್ಯಾರ್ಥಿಗಳಿಗೆ ಶಿಕ್ಷಕರು ಮುಖ್ಯವಾದಂತೆ ಕಟ್ಟಡ ನಿರ್ಮಾಣಕ್ಕೆ ಇಂಜಿನಿಯರ್ಸ್ ಮುಖ್ಯ. ಇಂಜಿನಿಯರ್‌ಗಳಿಂದಲೇ ದೇಶವನ್ನು ದೃಢ ಮತ್ತು ಸುರಕ್ಷತ ದೇಶವನ್ನಾಗಿ ನಿರ್ಮಾಣ ಮಾಡಲು ಸಾಧ್ಯ ಎಂದು ಶ್ರೀ ಬಸವೇಶ್ವರ ರೂರಲ್ ಎಜುಕೇಷನ್ ಆ್ಯಂಡ್ ಡೆವಲಪ್‌ಮೆಂಟ್ ಟ್ರಸ್ಟ್ ಕಾರ್ಯದರ್ಶಿ ಡಾ. ಶರಣಪ್ಪ ಕೊಟಗಿ ಹೇಳಿದರು.
ಶ್ರೀ ಬಸವೇಶ್ವರ ರೂರಲ್ ಎಜುಕೇಷನ್ ಆ್ಯಂಡ್ ಡೆವಲಪ್‌ಮೆಂಟ್ ಟ್ರಸ್ಟ್ ವತಿಯಿಂದ ಸತ್ತೂರಿನಲ್ಲಿ ಶನಿವಾರ ಏರ್ಪಡಿಸಿದ್ದ ಇಂಜಿನಿಯರ್ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನಕದಾಸ ಶಿಕ್ಷಣ ಸಮಿತಿ ಉಪಾಧ್ಯಕ್ಷ ಶಾಂತಣ್ಣ ಕಡಿವಾಳ ಮಾತನಾಡಿದರು. ಸಂಸ್ಥೆಯ ಕಟ್ಟಡವನ್ನು ನಿರ್ಮಾಣ ಮಾಡುತ್ತಿರುವ ಇಂಜಿನಿಯರ್ ಬಸವರಾಜ ಶೆಟ್ಟರ್ ಅವರಿಗೆ ಸನ್ಮಾನಿಸಲಾಯಿತು.
ಶ್ರೇಯ ಜನ ಸೇವಾ ಸಂಸ್ಥೆ ಅಧ್ಯಕ್ಷ ವಿ.ಜಿ. ಪಾಟೀಲ, ಸಂಸ್ಥೆ ಟ್ರಸ್ಟಿಗಳಾದ ಮೃತ್ಯುಂಜಯ ಕೊಟಗಿ, ನಾಗರಾಜ ಕೊಟಗಿ, ಡಾ. ಮಹಾಂತೇಶ ಹಿರೇಮಠ, ಡಾ. ಸರೋಜಿನಿ ದೇಸಾಯಿ, ನವೀನ ಕೆ., ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಇತರರು ಇದ್ದರು.