ಸನ್ಯಾಸಿಹಳ್ಳಿ ಗ್ರಾಪಂ ಅಧ್ಯಕ್ಷ ಎಸ್.ಟಿ.ರಮೇಶ್

21blrp3
ಬೇಲೂರು ತಾಲೂಕಿನ ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷ ಎಸ್.ಟಿ.ರಮೆಶ್ ಹಾಗೂ ಉಪಾಧ್ಯಕ್ಷೆ ಪಾರ್ವತಮ್ಮ ಅವರನ್ನು ಗ್ರಾಮಸ್ಥರು ಅಭಿನಂದಿಸಿದರು. ಎಸ್.ಎಂ.ಹೊನ್ನಪ್ಪ, ದೇವರಾಜ್, ಎಸ್.ಎಂ.ರಾಜು, ಶಾಂತೇಗೌಡ ಇತರರು ಇದ್ದರು.
Published on

ಬೇಲೂರು: ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಎಸ್.ಟಿ.ರಮೇಶ್, ಉಪಾಧ್ಯಕ್ಷರಾಗಿ ಪಾರ್ವತಮ್ಮ ಅವಿರೋಧವಾಗಿ ಸೋಮವಾರ ಆಯ್ಕೆಯಾದರು.

ಬೇಲೂರು ತಾಲೂಕಿನ ಸನ್ಯಾಸಿಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗ, ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಎಸ್.ಟಿ.ರಮೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಪಾರ್ವತಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ರವಿ ಕಿರಣ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ಗ್ರಾಮಸ್ಥರಾದ ಎಸ್.ಎಂ.ಹೊನ್ನಪ್ಪ, ದೇವರಾಜ್, ಎಸ್.ಎಂ.ರಾಜು, ಶಾಂತೇಗೌಡ, ನರೇಂದ್ರ, ಕುಮಾರ್, ವಾಸು, ಶಿವೇಗೌಡ, ಮೋಹನ್ ಕುಮಾರ್, ಜಯರಂಗೇಗೌಡ, ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net