ಸಫಾಯಿ ಕರ್ಮಚಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ

ಸಫಾಯಿ ಕರ್ಮಚಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ
Published on

ಹಾಸನ: ರಾಜ್ಯ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಡಿ.ಆರ್. ರಾಜು ಅವರನ್ನು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿಗಳನ್ನು ಒತ್ತಾಯಿಸುವುದಾಗಿ ಸಕಲೇಶಪುರ ಪುರಸಭಾ ಸದಸ್ಯರು ಹಾಗೂ ಸಫಾಯಿ ಕರ್ಮಚಾರಿ ವಿಚಕ್ಷಣಾ ಸಮಿತಿ ಸದಸ್ಯರಾದ ವರಲಕ್ಷ್ಮೀ ಎಸ್.ಆರ್. ಕೃಷ್ಣ ತಿಳಿಸಿದರು.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯ ಕನ್ನಡ ಮಾದಿಗ, ಬೆಂಗಳೂರು ಮಾದಿಗ ಈ ಸಮಾಜಗಳಿಗೆ ಅಧ್ಯಕ್ಷ ಸ್ಥಾನಮಾನವನ್ನು ನೀಡಿದ್ದು, ಇದುವರೆಗೂ ನಮ್ಮ ಆದಿ ದ್ರಾವಿಡ ಮಾದಿಗ ಸಮಾಜಕ್ಕೆ ಯಾವುದೇ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನಮಾನ ನೀಡಿಲ್ಲ. ನಮ್ಮ ಸಮಾಜವು ಕರ್ನಾಟಕ ರಾಜ್ಯದಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ನಮ್ಮ ನಾಯಕರಾದ ಡಿ.ಆರ್.ರಾಜು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸುಮಾರು 30 ವರ್ಷಗಳಿಂದ ಪಕ್ಷ ಸಂಘಟನೆ ಮಾಡಿ ಎಲ್ಲಾ ಜಿಲ್ಲೆಗಳಲ್ಲಿ ಪೌರ ಕಾರ್ಮಿಕ ಸಮಾಜದ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರುವ ರೀತಿಯಲ್ಲಿ ಶ್ರಮ ವಹಿಸಿರುತ್ತಾರೆ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವುದರಿಂದ ಮುಂದಿನ ಲೋಕಸಭಾ ಚುನಾವಣಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ವಿಶೇಷವಾಗಿ ಮಂಡ್ಯ, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅನುಕೂಲ ಆಗಲಿದೆ. ಡಿ.ಆರ್. ರಾಜು ಅವರು ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಪೌರ ಕಾರ್ಮಿಕರ ಯಾವುದೇ ಸಮಸ್ಯೆಗಳಿಗೆ ಯಾವುದೇ ಸಮಯದಲ್ಲಿ ಸ್ಪಂದಿಸಿ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ. ಮಹದೇವಪ್ಪ ಅವರು ಕೂಡಲೇ ಈ ಬಗ್ಗೆ ಗಮನಹರಿಸಿ ಡಿ.ಅರ್. ರಾಜು ಅವರನ್ನು ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾಗಿ ಆಯ್ಕೆ ಮಾಡಿದರೆ ಎಲ್ಲಾ ಪೌರ ಕಾರ್ಮಿಕರಿಗೆ ಅನುಕೂಲ ಆಗಲಿದೆ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಡಾ. ಬಿ.ಆರ್. ಅಂಬೇಡ್ಕರ್ ಆದಿ ದ್ರಾವಿಡ ಯುವಕರ ಅಭಿವೃದ್ಧಿ ಮಹಾಸಂಘದ ಅಧ್ಯಕ್ಷರಾದ ಡಿ. ಬನ್ನೇರಿ, ಖಜಾಂಚಿ ಚೆಲುವ, ತಾಲೂಕು ಅಧ್ಯಕ್ಷ ವೆಂಕಟೇಶ್, ಖಜಾಂಚಿ ಕಿಶೋರ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net