ಸಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

Bharath
Published on

ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶ ಅಳವಡಿಸಿಕೊಂಡು, ಸಮ ಸಮಾಜ ನಿರ್ಮಾಣಕ್ಕೆ ಸರ್ವರೂ ಕೈಜೋಡಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಗ್ ಹೇಳಿದರು.

ಆರ್‌ಟಿಒ ಕಚೇರಿಯಲ್ಲಿ ಭಾನುವಾರ ನಡೆದ ಅಂಬೇಡ್ಕರ್ ಅವರ 133ನೇ ಜಯಂತಿಯಲ್ಲಿ ಮಾತನಾಡಿ, ಅಸ್ಪಶ್ಯತೆ ಸೇರಿ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿ, ಶಿಕ್ಷಣದಿಂದಲೇ ಅಭಿವೃದ್ಧಿ ಸಾಧ್ಯ ಎಂಬ ಅವರ ನಿಲುವು ಎಂದೆಂದಿಗೂ ಪ್ರಸ್ತುತ ಎಂದರು.

ಕಚೇರಿ ಅಧೀಕ್ಷಕ ಹೇಮಂತ್‌ಕುಮಾರ್ ಮಾತನಾಡಿ, ಅಂಬೇಡ್ಕರ್ ನುರಿತ ಆರ್ಥಿಕ ತಜ್ಞರು. ಅವರು ಕೈಗೊಂಡ ಅಧ್ಯಯನ, ಜ್ಞಾನಸಂಪತ್ತಿಗೆ ಕೊಲಂಬಿಯಾ ವಿವಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ ಎಂದರು.

ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net